Home News Unlimited 5G Data Offer: ಜಿಯೋ-ಏರ್ಟೆಲ್ ಬಳಕೆದಾರರಿಗೆ ಅತಿ ದೊಡ್ಡ ಶಾಕ್: ಅನ್ಲಿಮಿಟೆಡ್ ಉಚಿತ 5G...

Unlimited 5G Data Offer: ಜಿಯೋ-ಏರ್ಟೆಲ್ ಬಳಕೆದಾರರಿಗೆ ಅತಿ ದೊಡ್ಡ ಶಾಕ್: ಅನ್ಲಿಮಿಟೆಡ್ ಉಚಿತ 5G ಇಂಟರ್ನೆಟ್ ಅಂತ್ಯ?

Unlimited 5G Data Offer
Image source: Gizbot

Hindu neighbor gifts plot of land

Hindu neighbour gifts land to Muslim journalist

Unlimited 5G Data Offer: 5G ಇಂಟರ್ನೆಟ್ (5G Internet) ಬಳಕೆ ಮಾಡುವ ಕೋಟ್ಯಂತರ ಭಾರತೀಯ ಗ್ರಾಹಕರಿಗೆ ಶಾಕಿಂಗ್ ಸುದ್ದಿ ಹೊರಬಿದ್ದಿದೆ.

ದೇಶದ ಎರಡೂ ಪ್ರಮುಖ ಟೆಲಿಕಾಂ ಕಂಪನಿಗಳು ದೇಶಾದ್ಯಂತ 5G ಸೇವೆಯ (Unlimited 5G Data Offer)ವ್ಯಾಪ್ತಿಯನ್ನು ಒದಗಿಸಲು ಯೋಜನೆ ಹಾಕಿಕೊಂಡಿದೆ. ದೇಶಾದ್ಯಂತ ಸುಮಾರು 12.5 ಕೋಟಿ 5ಜಿ ಬಳಕೆದಾರರಿದ್ದಾರೆ. ಈ ನಡುವೆ, ದೇಶದ ಎರಡು ದೊಡ್ಡ ಟೆಲಿಕಾಂ ಕಂಪನಿಗಳು ರಿಲಯನ್ಸ್ ಜಿಯೋ (Reliance Jio)ಮತ್ತು ಭಾರ್ತಿ ಏರ್‌ಟೆಲ್ (Airtel)ತಮ್ಮ ಅನಿಯಮಿತ 5G ಡೇಟಾ ಯೋಜನೆಗಳನ್ನು ಸ್ಥಗಿತಗೊಳಿಸಲು ಮುಂದಾಗಿದೆ ಎನ್ನಲಾಗುತ್ತಿದೆ. ನೀವೇನಾದರೂ 5G ಅನ್ನು ಉಚಿತವಾಗಿ ಬಳಸುತ್ತಿದ್ದರೆ ಈ ಆಫರ್ ಸದ್ಯದಲ್ಲೇ ಕೊನೆಗೊಳ್ಳಲಿದೆ ಎನ್ನಲಾಗಿದೆ.

ಇದನ್ನೂ ಓದಿ:Divya Pahuja Murder: ಮಾಜಿ ರೂಪದರ್ಶಿ ದಿವ್ಯಾ ಪಹುಜಾ ಮರ್ಡರ್ ಕೇಸ್ ; ಮರಣೋತ್ತರ ಪರೀಕ್ಷೆಯಲ್ಲಿ ರೋಚಕ ಮಾಹಿತಿ ಬಹಿರಂಗ!! ಆಕೆಯ ತಲೆಯಲ್ಲಿ ಪತ್ತೆಯಾಗಿದ್ದೇನು ಗೊತ್ತಾ??

2024 ರ ಅಂತ್ಯದ ವೇಳೆಗೆ ಭಾರತದಲ್ಲಿ 5G ಬಳಕೆದಾರರ ಸಂಖ್ಯೆ 20 ಕೋಟಿ ದಾಟುವ ನಿರೀಕ್ಷೆಯಿದ್ದು,ರಿಲಯನ್ಸ್ ಜಿಯೋ ಮತ್ತು ಏರ್‌ಟೆಲ್‌ನ 5G ಯೋಜನೆಗಳು ಅಸ್ತಿತ್ವದಲ್ಲಿರುವ 4G ಯೋಜನೆಗಳಿಗಿಂತ 5-10 ಪ್ರತಿಶತದಷ್ಟು ದುಬಾರಿಯಾಗುವ ಸಾಧ್ಯತೆ ದಟ್ಟವಾಗಿದೆ. ಇದಲ್ಲದೆ, ಎರಡೂ ಕಂಪನಿಗಳು 30-40 ಪ್ರತಿಶತ ಹೆಚ್ಚಿನ ಡೇಟಾವನ್ನು ನೀಡಬಹುದು ಎಂದು ಹೇಳಲಾಗಿದೆ. ಹಿಂದುಸ್ಥಾನ್ ಟೈಮ್ಸ್ ವರದಿಯ ಅನುಸಾರ, ಹೊಸ 5ಜಿ ರೀಚಾರ್ಜ್ ಯೋಜನೆಗಳು ಪ್ರಸ್ತುತ 4G ರೀಚಾರ್ಜ್ ದರಗಳಿಗಿಂತ ಕನಿಷ್ಠ 5-10% ದುಬಾರಿಯಾಗಲಿದೆ. ಇದರಿಂದ ಟೆಲಿಕಾಂ ಕಂಪನಿಗಳ ಆದಾಯ ಹೆಚ್ಚಾಗಲಿದೆ ಎಂದು ವಿಶ್ಲೇಷಕರು ಉಲ್ಲೇಖಿಸಿದ್ದಾರೆ.