Home News MP: ಲಂಬಕೋನ ಆಕಾರದಲ್ಲಿ ಅವೈಜ್ಞಾನಿಕ ರೈಲ್ವೆ ಸೇತುವೆ ನಿರ್ಮಾಣ – 8 ಎಂಜಿನಿಯರ್ ಗಳು ಸಸ್ಪೆಂಡ್

MP: ಲಂಬಕೋನ ಆಕಾರದಲ್ಲಿ ಅವೈಜ್ಞಾನಿಕ ರೈಲ್ವೆ ಸೇತುವೆ ನಿರ್ಮಾಣ – 8 ಎಂಜಿನಿಯರ್ ಗಳು ಸಸ್ಪೆಂಡ್

Hindu neighbor gifts plot of land

Hindu neighbour gifts land to Muslim journalist

MP: ನಗರದ ಐಶ್‌ಬಾಗ್ ಪ್ರದೇಶದಲ್ಲಿ ಹೊಸ ರೈಲು ಓವರ್ ಬ್ರಿಡ್ಜ್‌ನ 90 ಡಿಗ್ರಿ ತಿರುವು ಹೊಂದಿರುವ ದೋಷಪೂರಿತ ವಿನ್ಯಾಸಕ್ಕಾಗಿ ಲೋಕೋಪಯೋಗಿ ಇಲಾಖೆಯ ಇಬ್ಬರು ಮುಖ್ಯ ಎಂಜಿನಿಯರ್‌ಗಳು ಸೇರಿದಂತೆ 7 ಎಂಜಿನಿಯರ್‌ಗಳನ್ನು ಮಧ್ಯಪ್ರದೇಶ ಸರ್ಕಾರ ಶನಿವಾರ ಅಮಾನತುಗೊಳಿಸಿದೆ.

ಹೌದು, ಮಹಾಮಯಿ ಕಾ ಬಾಗ್‌, ಪುಷ್ಪಾ ನಗರ್ ಹಾಗೂ ನ್ಯೂ ಭೋಪಾಲ್‌ ಪ್ರದೇಶಗಳಿಗೆ ಸಂಪರ್ಕ ಕಲ್ಪಿಸುವ ಈ ಮೇಲ್ಸೇತುವೆಯನ್ನು ₹ 18 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿತ್ತು. ಆದರೆ ಈ ರೈಲ್ವೆ ಮೇಲ್ಸೇತುವೆಯನ್ನು 90 ಡಿಗ್ರಿ ತಿರುವು ಇರುವಂತೆ ನಿರ್ಮಿಸಲಾಗಿದೆ. ಇದು ಅಪಾಯಕ್ಕೆ ಎಡೆಮಾಡಿಕೊಡುತ್ತದೆ ಎಂಬ ಕಾರಣದಿಂದಾಗಿ ಸಾರ್ವಜನಿಕರಿಂದ ಭಾರಿ ಆಕ್ರೋಶ ವ್ಯಕ್ತವಾಗಿದೆ. ಸಾಮಾಜಿಕ ಮಾಧ್ಯಮಗಳಲ್ಲಿಯೂ ಟೀಕೆಗಳು ಕೇಳಿ ಬಂದಿವೆ.

ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡಿರುವ ಬಗ್ಗೆ ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್‌/ಟ್ವಿಟರ್‌ನಲ್ಲಿ ಮಾಹಿತಿ ನೀಡಿರುವ ಮುಖ್ಯಮಂತ್ರಿ ಮೋಹನ್‌ ಯಾದವ್‌, ‘ಐಷ್‌ಬಾಗ್‌ನಲ್ಲಿ ರೈಲ್ವೆ ಮೇಲ್ಸೇತುವೆ ನಿರ್ಮಾಣ ಕಾಮಗಾರಿಯಲ್ಲಿ ಗಂಭೀರ ನಿರ್ಲಕ್ಷ್ಯ ಕಂಡುಬಂದಿದೆ. ಈ ಸಂಬಂಧ ತನಿಖೆಗೆ ಆದೇಶಿಸಿದ್ದೆ. ವರದಿಯ ಆಧಾರದಲ್ಲಿ ಲೋಕೋಪಯೋಗಿ ಇಲಾಖೆಯ ಎಂಟು ಎಂಜಿನಿಯರ್‌ಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ’ ಎಂದು ತಿಳಿಸಿದ್ದಾರೆ.

ನಿರ್ಮಾಣ ಸಂಸ್ಥೆ ಮತ್ತು ವಿನ್ಯಾಸ ಸಲಹೆಗಾರರನ್ನು ಕಪ್ಪುಪಟ್ಟಿಗೆ ಸೇರಿಸಲಾಗಿದ್ದು, ಆರ್‌ಒಬಿಯಲ್ಲಿ ಅಗತ್ಯ ಸುಧಾರಣೆಗಳನ್ನು ಮಾಡಲು ಸಮಿತಿಯನ್ನು ರಚಿಸಲಾಗಿದೆ. ಸುಧಾರಣೆ ಮಾಡಿದ ನಂತರವೇ ಆರ್‌ಒಬಿ ಉದ್ಘಾಟನೆಗೊಳ್ಳಲಿದೆ ಎಂದು ಹೇಳಿದ್ದಾರೆ.