Home » ವಾಲ್ಮೀಕಿ ಹಗರಣಕ್ಕೆ ಬಿಜೆಪಿ ‘ಪಾದ’ ಪ್ರಹಾರ; ಸೆ.1ರಿಂದ ಹೋರಾಟ ಫಿಕ್ಸ್ -ಬಿ.ವೈ ವಿಜಯೇಂದ್ರ

ವಾಲ್ಮೀಕಿ ಹಗರಣಕ್ಕೆ ಬಿಜೆಪಿ ‘ಪಾದ’ ಪ್ರಹಾರ; ಸೆ.1ರಿಂದ ಹೋರಾಟ ಫಿಕ್ಸ್ -ಬಿ.ವೈ ವಿಜಯೇಂದ್ರ

0 comments

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ಹಣ ವರ್ಗಾವಣೆ ಪ್ರಕರಣವನ್ನು ಮುಂದಿಟ್ಟುಕೊಂಡು ಬಿಜೆಪಿ ರಾಜ್ಯ ಸರ್ಕಾರದ ವಿರುದ್ಧ ಮತ್ತೊಂದು ಹಂತದ ಹೋರಾಟಕ್ಕೆ ಸಜ್ಜಾಗಿದೆ. ಸೆಪ್ಟೆಂಬರ್ 1ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿವರೆಗೆ ಸುಮಾರು 200 ಕಿ.ಮೀ. ಪಾದಯಾತ್ರೆ ನಡೆಸಲು ಪಕ್ಷ ನಿರ್ಧರಿಸಿದೆ.

ಬೆಂಗಳೂರಲ್ಲಿ ಭೀಕರ ಅಪಘಾತ : ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್ ಸವಾರ ಸಾವು

ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಈ ಕುರಿತು ಮಾಹಿತಿ ನೀಡಿದ್ದು, ಪಾದಯಾತ್ರೆಗೆ ಜೆಡಿಎಸ್ ಕೂಡ ಬೆಂಬಲ ನೀಡಲಿದೆ ಎಂದು ತಿಳಿಸಿದ್ದಾರೆ. ರಾಯಚೂರು ಜಿಲ್ಲೆಯ ಗುರುಗುಂಟದಿಂದ ಪಾದಯಾತ್ರೆ ಆರಂಭವಾಗಲಿದೆ.

ಗುರುಗುಂಟದಿಂದ ಆರಂಭವಾಗುವ ಪಾದಯಾತ್ರೆ ಲಿಂಗಸೂಗೂರು, ಮಸ್ಕಿ, ಸಿಂಧನೂರು, ಶಿರಗುಪ್ಪ, ತೆಕ್ಕಲಕೋಟೆ ಹಾಗೂ ಸಿಂದಗೇರಿ ಮಾರ್ಗವಾಗಿ ಬಳ್ಳಾರಿ ತಲುಪಲಿದೆ. 8ರಿಂದ 9 ವಿಧಾನಸಭಾ ಕ್ಷೇತ್ರಗಳಲ್ಲಿ ಪಾದಯಾತ್ರೆ ಸಾಗಲಿದ್ದು, ನಾಲ್ಕು ಎಸ್‌ಟಿ ಮೀಸಲು ಕ್ಷೇತ್ರಗಳನ್ನು ಒಳಗೊಳ್ಳಲಿದೆ.

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪಾದಯಾತ್ರೆಗೆ ಚಾಲನೆ ನೀಡಲಿದ್ದು, ಸಮಾರೋಪ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಭಾಗವಹಿಸಲಿದ್ದಾರೆ.
ಬಿ. ನಾಗೇಂದ್ರ ರಾಜೀನಾಮೆ, ಮೀಸಲಾತಿ, ಉತ್ತರ ಕರ್ನಾಟಕದ ನೀರಾವರಿ ಯೋಜನೆಗಳು, ಬರ ಪರಿಸ್ಥಿತಿ ಹಾಗೂ ಖಾಲಿ ಹುದ್ದೆಗಳ ಭರ್ತಿ ಸೇರಿದಂತೆ ಹಲವು ವಿಚಾರಗಳನ್ನು ಮುಂದಿಟ್ಟುಕೊಂಡು ಜನರ ಗಮನ ಸೆಳೆಯಲು ಬಿಜೆಪಿ ತೀರ್ಮಾನಿಸಿದೆ.

ಬೆಂಗಳೂರಲ್ಲಿ ಭೀಕರ ಅಪಘಾತ : ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್ ಸವಾರ ಸಾವು

ಪಾದಯಾತ್ರೆಯ ರೂಪುರೇಷೆ ಕುರಿತು ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಆರ್. ಅಶೋಕ್, ಛಲವಾದಿ ನಾರಾಯಣಸ್ವಾಮಿ, ಸಿ.ಟಿ. ರವಿ, ಗೋವಿಂದ ಕಾರಜೋಳ, ಶ್ರೀರಾಮುಲು, ಜನಾರ್ದನ ರೆಡ್ಡಿ ಸೇರಿದಂತೆ ಪಕ್ಷದ ಹಲವು ಪ್ರಮುಖ ನಾಯಕರು ಭಾಗವಹಿಸಿದ್ದರು.

You may also like