ಶನಿವಾರ, 24 ಅಕ್ಟೋಬರ್ 2026

ವಾರಣಾಸಿ: ಗಂಗಾ ನದಿ ಅಪಾಯದ ಮಟ್ಟ ಮೀರಿ ಹರಿವು

PM Modi

ವಾರಣಾಸಿ,ಸೆ.3: ಗಂಗಾ ನದಿಯ ನೀರಿನ ಮಟ್ಟ ಅಪಾಯದ ಅಂಚಿಗೆ ತಲುಪಿ ಪ್ರವಾಹ ಪರಿಸ್ಥಿತಿ ತಲೆದೋರಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ನಗರದ ಮೇಯರ್‌ ಹಾಗೂ ಜಿಲ್ಲಾಧಿಕಾರಿ ಸತ್ಯೇಂದ್ರ ಕುಮಾರ್‌ ಅವರಿಗೆ ದೂರವಾಣಿ ಕರೆ ಮಾಡಿ ಪರಿಸ್ಥಿತಿಯ ಸಂಪೂರ್ಣ ಮಾಹಿತಿ ಪಡೆದಿದ್ದು, ಅಲ್ಲಿನ ನಾಗರಿಕರಿಗೆ ಯಾವುದೇ ರೀತಿಯ ಅನಾನುಕೂಲವಾಗದಂತೆ ನೋಡಿಕೊಳ್ಳಲು, ಪರಿಹಾರ ಕಾರ್ಯಚರಣೆಯನ್ನು ಕೈಗೊಳ್ಳಲು ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದಾರೆ.