ವೇಣೂರು: ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ 2025- 26ನೇ ಸಾಲಿನಲ್ಲಿ ಮಾಡಿದ ಉತ್ತಮ ವ್ಯವಹಾರವನ್ನು ಗುರುತಿಸಿ ಆ. 22ರಂದು ಮಂಗಳೂರು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಮಹಾಸಭೆಯಲ್ಲಿ ಅಧ್ಯಕ್ಷ ಡಾ. ಎಂ. ಎನ್. ರಾಜೇಂದ್ರ ಕುಮಾರ್ ಉತ್ತಮ ಸಹಕಾರ ಸಂಘ ಪ್ರೋತ್ಸಾಹ ಬಹುಮಾನ ನೀಡಿ ಸಂಘದ ಅಧ್ಯಕ್ಷ ಸುಂದರ ಹೆಗ್ಡೆ ಮತ್ತು ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಜಯಂತ ಪೂಜಾರಿ ಇವರನ್ನು ಗೌರವಿಸಿದರು. ಈ ಸಂದರ್ಭ ಸಂಘದ ನಿರ್ದೇಶಕಿ ಆಶಾ, ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಕುಶಾಲಪ್ಪ ಗೌಡ ಮತ್ತಿತರರು ಹಾಜರಿದ್ದರು.
ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಉತ್ತಮ ಸಹಕಾರ ಸಂಘ ಪ್ರಶಸ್ತಿ



