Home News Bengaluru: ಹಿರಿಯ ಕವಿ, ಸಾಹಿತಿ ಎಚ್.ಎಸ್. ವೆಂಕಟೇಶ್ ಮೂರ್ತಿ ನಿಧನ!

Bengaluru: ಹಿರಿಯ ಕವಿ, ಸಾಹಿತಿ ಎಚ್.ಎಸ್. ವೆಂಕಟೇಶ್ ಮೂರ್ತಿ ನಿಧನ!

Hindu neighbor gifts plot of land

Hindu neighbour gifts land to Muslim journalist

Bengaluru: ಹಿರಿಯ ಕವಿ, ಸಾಹಿತಿ ಎಚ್‌.ಎಸ್. ವೆಂಕಟೇಶ್ ಮೂರ್ತಿ ಶುಕ್ರವಾರ ನಿಧನ ಹೊಂದಿದ್ದಾರೆ. ಅವರಿಗೆ 81 ವರ್ಷ ವಯಸಾಗಿತ್ತು. ಹಲವು ದಿನಗಳಿಂದ ಕ್ಯಾನ್ಸ‌ರ್ ನಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೇ ಹಾಗೂ ವಯೋಸಹಜ ಕಾರಣಗಳಿಂದ ಇಂದು ಅವರು ಇಹಲೋಕ ತ್ಯಜಿಸಿದ್ದಾರೆ.

ಸಾಹಿತ್ಯದ ಹಲವು ಪ್ರಾಕಾರಗಳಲ್ಲಿ ಕೃಷಿ ಮಾಡಿದ್ದ ಅವರು ಕವಿತೆಗಳು ಮಾತ್ರವಲ್ಲದೇ ಕಾದಂಬರಿ, ಮಕ್ಕಳ ಸಾಹಿತ್ಯ ಹಾಗೂ ನಾಟಕಗಳನ್ನೂ ರಚಿಸಿದ್ದರು.

ಕ್ರಿಯಾಪರ್ವ, ಒಣಮರದ ಗಿಳಿಗಳು, ಎಷ್ಟೊಂದು ಮುಗಿಲು, ಅಮೆರಿಕದಲ್ಲಿ ಬಿಲ್ಲುಹಬ್ಬ ನದೀತೀರದಲ್ಲಿ, ಉತ್ತರಾಯಣ ಮತ್ತು ಕನ್ನಡಿಯ ಸೂರ್ಯ, ಉರಿಯ ಉಯ್ಯಾಲೆ, ಅಗ್ನಿವರ್ಣ, ಮಂಘಥರೆ, ತಾಪಿ, ಅತಿಮಾನುಷರು, ಕದಿರನಕೋಟೆ, ಅಗ್ನಿಮುಖಿ, ವೇದವತಿ ನದಿಯಲ್ಲ ಅವರ ಪ್ರಮುಖ ಕೃತಿಗಳು. ಎಚ್‌ಎಸ್‌ವಿ ಅವರಿಗೆ ಹಲವು ರಾಜ್ಯ ಹಾಗೂ ರಾಷ್ಟ್ರೀಯ ಪ್ರಶಸ್ತಿಗಳು ಸಂದಿವೆ.