ವಿಜಯಪುರ ನಗರದ ಹೊರಭಾಗದಲ್ಲಿರುವ ಭೂತನಾಳ ಕೆರೆಯಲ್ಲಿ ಮೂವರು ಮಹಿಳೆಯರು ಹಾಗೂ ಓರ್ವ ಪುರುಷ ಸೇರಿ ನಾಲ್ವರು ವ್ಯಕ್ತಿಗಳ ಶವಗಳು ಪತ್ತೆಯಾಗಿದ್ದು, ಭಾರೀ ಆತಂಕಕ್ಕೆ ಕಾರಣವಾಗಿದೆ.
Sponsoredಶವಗಳು ಪತ್ತೆಯಾಗಿರುವ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಮೃತರ ಗುರುತು ಇನ್ನೂ ಸಿಕ್ಕಿಲ್ಲ. ಹಾಗೂ ಘಟನೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.
ನಾಲ್ವರೂ ಒಂದೇ ವೇಳೆ ಕೆರೆಗೆ ಬಿದ್ದರೇ ಅಥವಾ ಬೇರೆ ಬೇರೆ ಸಂದರ್ಭಗಳಲ್ಲಿ ಮೃತಪಟ್ಟಿದ್ದಾರೆಯೇ ಎಂಬುದು ತನಿಖೆಯಿಂದ ತಿಳಿದುಬರಬೇಕಿದೆ. ಪೊಲೀಸರು ಪ್ರಕರಣದ ಕುರಿತು ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದು, ಸಾವಿನ ಕಾರಣ ಪತ್ತೆಹಚ್ಚಲು ತನಿಖೆ ಮುಂದುವರಿಸಿದ್ದಾರೆ.




