ಸೋಮವಾರ, 26 ಅಕ್ಟೋಬರ್ 2026
Trending

ವಿವೇಕಾನಂದ ಇಂಜಿನಿಯರಿoಗ್ ಕಾಲೇಜಿನ ನೂತನ ಪ್ರಾಂಶುಪಾಲರಾಗಿ ಡಾ.ಪುರುಷೋತ್ತಮ ಚಿಪ್ಪಾರ್ ಅಧಿಕಾರ ಸ್ವೀಕಾರ

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು(ರಿ) ಇದರಿಂದ ನಡೆಸಲ್ಪಡುವ ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿoಗ್ ಎಂಡ್ ಟೆಕ್ನಾಲಜಿಯ ನೂತನ ಪ್ರಾಂಶುಪಾಲರಾಗಿ ಡಾ.ಪುರುಷೋತ್ತಮ ಚಿಪ್ಪಾರ್ ಅಧಿಕಾರ ವಹಿಸಿಕೊಂಡಿದ್ದಾರೆ.

Sponsored

ಈ ಸಂದರ್ಭದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಕೃಷ್ಣ ಕುಮಾರ್ ಶೆಟ್ಟಿ, ಕಾರ್ಯದರ್ಶಿ ವಿಜಯನಾರಾಯಣ.ಕೆ.ಎಮ್, ಇಂಜಿನಿಯರಿoಗ್ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ರವಿಕೃಷ್ಣ.ಡಿ.ಕಲ್ಲಾಜೆ, ಸಂಚಾಲಕ ಪ್ರಸನ್ನ ದರ್ಭೆ ನೂತನ ಪ್ರಾಂಶುಪಾಲರಿಗೆ ಶುಭ ಹಾರೈಸಿದರು.
ವಿವೇಕಾನಂದ ವಿದ್ಯಾವರ್ಧಕ ಸಂಘದ ನಿರ್ದೇಶಕ ರಮೇಶ್ಚಂದ್ರ, ಕಾರ್ಯನಿರ್ವಹಣಾಧಿಕಾರಿ ಲಕ್ಷ್ಮೀ ಪ್ರಸಾದ್, ಸಹ ಕಾರ್ಯನಿರ್ವಹಣಾಧಿಕಾರಿ ವೆಂಕಟ್ರಮಣ ಭಟ್, ವಿವೇಕಾನಂದ ಇಂಜಿನಿಯರಿoಗ್ ಕಾಲೇಜು ಆಡಳಿತ ಮಂಡಳಿಯ ಕೋಶಾಧಿಕಾರಿ ಅರವಿಂದ.ವಿ, ನಿರ್ದೇಶಕರಾದ ಮನೋಜ್ ಕುಮಾರ್, ಸುಜಿತ್ ಕುಮಾರ್, ರಕ್ಷಾ ಪ್ರಭು ವಿವಿದ ವಿಭಾಗಗಳ ಮುಖ್ಯಸ್ಥರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಪ್ರಾಂಶುಪಾಲರ ಪರಿಚಯ:
ಡಾ.ಪುರುಷೋತ್ತಮ ಚಿಪ್ಪಾರ್ ಉನ್ನತ ಶಿಕ್ಷಣ, ಉದ್ಯಮ ಕ್ಷೇತ್ರ ಹಾಗೂ ತಂತ್ರಜ್ಞಾನ ಕಾರ್ಯತಂತ್ರಗಳಲ್ಲಿ 15 ವರ್ಷಕ್ಕೂ ಹೆಚ್ಚು ಅನುಭವವನ್ನು ಹೊಂದಿರುವ ಶಿಕ್ಷಣ ತಜ್ಞರಾಗಿದ್ದಾರೆ. ಇವರು ದಕ್ಷಿಣ ಕೊರಿಯಾದ ಇನ್ಹಾ ವಿಶ್ವವಿದ್ಯಾನಿಲಯದಿಂದ ಮೆಕ್ಯಾನಿಕಲ್ ಇಂಜಿನಿಯರಿAಗ್ ವಿಭಾಗದಲ್ಲಿ ಡಾಕ್ಟರೇಟ್ ಪದವಿಯನ್ನು ಪಡೆದುಕೊಂಡಿದ್ದಾರೆ. ಸಂಶೋಧನೆ, ಶೈಕ್ಷಣಿಕ ಆಡಳಿತ, ಸಂಸ್ಥೆಯ ಅಭಿವೃದ್ಧಿ ಮತ್ತು ಉದ್ಯಮ ವಲಯದೊಂದಿಗಿನ ಸಹಯೋಗದಲ್ಲಿ ಅವರು ಅನುಭವವನ್ನು ಹೊಂದಿದ್ದಾರೆ. ಇವರು ಮಂಗಳೂರಿನ ಸೈಂಟ್ ಜೋಸೆಫ್ ಇಂಜಿನಿಯರಿoಗ್ ಕಾಲೇಜಿನಲ್ಲಿ ಉಪಪ್ರಾಂಶುಪಾಲರು ಹಾಗೂ ಸಂಶೋಧನೆ ಮತ್ತು ಅಭಿವೃದ್ಧಿ ವಿಭಾಗದ ಡೀನ್ ಆಗಿ ಕಾರ್ಯನಿರ್ವಹಿಸಿದ ಅನುಭವವನ್ನು ಹೊಂದಿದ್ದಾರೆ. ಅದಕ್ಕೂ ಮೊದಲು ಅದೇ ಸಂಸ್ಥೆಯಲ್ಲಿ ಮೆಕ್ಯಾನಿಕಲ್ ವಿಭಾಗ ಮುಖ್ಯಸ್ಥರಾಗಿ, ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿ ಶೈಕ್ಷಣಿಕ ಆಡಳಿತ, ಪಠ್ಯಕ್ರಮ ಅಭಿವೃದ್ಧಿ, ಸಂಶೋಧನೆಗೆ ಉತ್ತೇಜನ ಮತ್ತು ವಿದ್ಯಾರ್ಥಿಗಳ ಸಮಗ್ರ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿದ್ದಾರೆ.
ಹೈಡ್ರೀಜನ್ ಸಂಗ್ರಹಣೆ, ಇಂಧನ ಕೋಶಗಳು ಉಷ್ಣ ಮತ್ತು ದ್ರವ್ಯರಾಶಿ ವರ್ಗಾವಣೆ ಹಾಗೂ ಸುಸ್ಥಿರ ಇಂಧನ ವ್ಯವಸ್ಥೆಗಳ ಕ್ಷೇತ್ರದಲ್ಲಿ ಡಾ.ಚಿಪ್ಪಾರ್ ಗಮನಾರ್ಹ ಸಂಶೋಧನಾ ಸಾಧನೆಗಳನ್ನು ಮಾಡಿದ್ದಾರೆ. ಇವರ 25 ಕ್ಕೂ ಹೆಚ್ಚು ಸಂಶೋಧನಾ ಪ್ರಬಂಧಗಳು ಮತ್ತು ಇತರ ಶೈಕ್ಷಣಿಕ ಪ್ರಕಟಣೆಗಳು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ನಿಯತಕಾಲಿಕಗಳಲ್ಲಿ ಪ್ರಕಟಗೊಂಡಿವೆ. ಅಲ್ಲದೆ ಅನೇಕ ಸಂಶೋಧನಾ ನಿರತರಿಗೆ ಮಾರ್ಗದರ್ಶನವನ್ನು ನೀಡಿದ್ದಾರೆ. ಇಂಧನ ವ್ಯವಸ್ಥೆಗಳ ಕಾರ್ಯಕ್ಷಮತೆಯನ್ನು ಸುಧಾರಿಸಲು ಆರ್ಟಿಫೀಶಿಯಲ್ ಇಂಟೆಲಿಜೆನ್ಸ್ ಎಂಡ್ ಮೆಶಿನ್ ಲರ್ನಿಂಗ್ ತಂತ್ರಜ್ಞಾನವನ್ನು ಇಂಜಿನಿಯರಿoಗ್ ವ್ಯವಸ್ಥೆಗಳೊಂದಿಗೆ ಸಂಯೋಜಿಸುವ ಸಂಶೋಧನೆಯಲ್ಲಿ ಅವರು ಆಸಕ್ತಿ ಹೊಂದಿದ್ದಾರೆ.
ಬೆoಗಳೂರಿನ ಹನಿವೆಲ್ ಟೆಕ್ನಾಲಜಿ ಸೊಲ್ಯುಶನ್ ಪ್ರೆöÊವೇಟ್ ಲಿಮಿಟೆಡ್‌ನಲ್ಲಿ ಕಾರ್ಯನಿರ್ವಹಿಸುವ ಅವಧಿಯಲ್ಲಿ ಅವರು ತಂತ್ರಜ್ಞಾನ ಮೌಲ್ಯಮಾಪನ, ಪೇಟೆಂಟ್ ವಿಶ್ಲೇಷಣೆಯಲ್ಲಿ ಕೆಲಸಮಾಡಿದ್ದಾರೆ. ವಿಮಾನಯಾನ ಕ್ಷೇತ್ರದ ವಿಮಾನ ವ್ಯವಸ್ಥೆಗಳ ಮುನ್ಸೂಚನಾ ನಿರ್ವಹಣೆಗೆ ಸಂಬAದಿಸಿದ ಅಮೆರಿಕಾದ ಪೇಟೆಂಟ್‌ನಲ್ಲಿಯೂ ಅವರು ಕೊಡುಗೆ ನೀಡಿದ್ದಾರೆ. ಅಲ್ಲದೆ ಅವರು ಪ್ರಾಮಾಣೀಕೃತ ಪೇಟೆಂಟ್ ಮಾಹಿತಿ ತಜ್ಞರೂ ಆಗಿದ್ದಾರೆ.
ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿಯ ಐಡಿಯಾ ಲ್ಯಾಬ್ ಯೋಜನೆಯ ಪ್ರಧಾನ ಸಂಶೋಧಕರಾಗಿ ಅತ್ಯಾಧುನಿಕ ಮೂಲಮಾದರಿ ಅಭಿವೃದ್ಧಿ ಮತ್ತು ಹೊಸತನವನ್ನು ಸ್ಥಾಪಿಸುವಲ್ಲಿ ಅವರು ಪ್ರಮುಖ ಪಾತ್ರವನ್ನು ವಹಿಸಿದ್ದಾರೆ. ಇದರ ಮೂಲಕ ದಕ್ಷಿಣ ಕನ್ನಡದ ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗೆ ಪ್ರಾಯೋಗಿಕ ತಾಂತ್ರಿಕ ತರಬೇತಿ ಕಾರ್ಯಕ್ರಮದ ಮುಂದಾಳುತ್ವ ವಹಿಸಿದ್ದಾರೆ.
ಕರ್ನಾಟಕ ಸರ್ಕಾರದ ನ್ಯೂ ಏಜ್ ಇನ್ನೋವೇಶನ್ ನೆಟ್ವರ್ಕ್ ಯೋಜನೆಯಡಿ ಮೂಲ ಸೌಕರ್ಯಗಳ ಸ್ಥಾಪನೆ ಹಾಗೂ ಅಭಿವೃದ್ದಿಯಲ್ಲಿ ಕೊಡುಗೆಯನ್ನು ನೀಡಿದ್ದಾರೆ. ಈ ಸಂದರ್ಭದಲ್ಲಿ ವಿವಿಧ ಯೋಜನೆಯಡಿ ವಿಶೇಷ ಅನುದಾನವನ್ನು ತರಿಸುವಲ್ಲಿಯೂ ಶ್ರಮವಹಿಸಿದ್ದಾರೆ. ರಾಷ್ಟಿçÃಯ ಮಟ್ಟದ ನಾವೀನ್ಯತಾ ಸ್ಪರ್ಧೆಗಳಲ್ಲಿ ವಿದ್ಯಾರ್ಥಿ ತಂಡಗಳು ಭಾಗವಹಿಸಲು ಮಾರ್ಗದರ್ಶನ ಮಾಡುವ ಮೂಲಕ ವಿದ್ಯಾರ್ಥಿಗಳಲ್ಲಿ ಸೃಜನಶೀಲತೆ, ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಸಾಮರ್ಥ್ಯ ಮತ್ತು ಉದ್ಯಮಶೀಲ ಮನೋಭಾವ ಬೆಳೆಸಲು ಶ್ರಮಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.