ಶಾಲೆಯಲ್ಲಿ ಬೆಳಗಿನ ಉಪಾಹಾರವಾಗಿ ನೀಡಲಾಗಿದ್ದ ಉಪ್ಪಿಟ್ಟಿನಲ್ಲಿ ಹಲ್ಲಿ ಬಿದ್ದಿರುವುದು ಪತ್ತೆಯಾಗಿದೆ. ಇದನ್ನು ಸೇವಿಸಿದ 80ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ಶನಿವಾರ ನಡೆದಿದೆ.
ಉಪ್ಪಿಟ್ಟು ಸೇವಿಸಿದ ನಂತರ ಕೆಲ ವಿದ್ಯಾರ್ಥಿಗಳಲ್ಲಿ ತಲೆನೋವು ವಾಂತಿಯ ಲಕ್ಷಣಗಳು ಕಾಣಿಸಿದ್ದು, ಕೂಡಲೇ ಗ್ರಾಮಸ್ಥರು ಹಾಗೂ ಶಾಲಾ ಸಿಬ್ಬಂದಿ ಅಸ್ವಸ್ಥಗೊಂಡ ವಿದ್ಯಾರ್ಥಿಗಳನ್ನು ಮುಂಡರಗಿ ತಾಲೂಕು ಸರಕಾರಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಿದ್ದಾರೆ. ವಿದ್ಯಾರ್ಥಿಗಳ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. 100ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಯಾಗಿದೆ.




