Home News Rahul Gandhi: ಮತಗಳ್ಳತನ ಆರೋಪ: ಪ್ರತಿಭಟನೆಗೆ ಹೊರಟಿದ್ದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ 30...

Rahul Gandhi: ಮತಗಳ್ಳತನ ಆರೋಪ: ಪ್ರತಿಭಟನೆಗೆ ಹೊರಟಿದ್ದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ 30 ಸಂಸದರು ಅರೆಸ್ಟ್!

Hindu neighbor gifts plot of land

Hindu neighbour gifts land to Muslim journalist

Rahul Gandhi: ಮತಗಳ್ಳತನ ಆರೋಪ ಮಾಡಿ ಚುನಾವಣಾ ಆಯೋಗಕ್ಕೆ ಪ್ರತಿಭಟನಾ ರ್ಯಾಲಿ ಹೊರಟಿದ್ದ ರಾಹುಲ್ ಗಾಂಧಿ (Rahul Gandhi) , ಪ್ರಿಯಾಂಕಾ ಗಾಂಧಿ ಸೇರಿದಂತೆ 30 ಸಂಸದರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಚುನಾವಣಾ ಆಯೋಗದ ತಟಸ್ಥತೆಯ ವಿರುದ್ಧ ಸಾರ್ವಜನಿಕ ಪ್ರತಿಭಟನೆ ನಡೆಸಲಾಯಿತು. ರಾಹುಲ್ ಗಾಂಧಿ ನೇತೃತ್ವದಲ್ಲಿ ಇಂಡಿಯಾ ಒಕ್ಕೂಟದ ಸಂಸದರು, ಸಂಸತ್ ಭವನದಿಂದ ಚುನಾವಣಾ ಆಯೋಗಕ್ಕೆ ಪ್ರತಿಭಟನಾ ರ್ಯಾಲಿ ನಡೆಸಲು ಮುಂದಾಗಿದ್ದವರನ್ನು ದೆಹಲಿ ಪೊಲೀಸರು ಎಲ್ಲರನ್ನೂ ವಶಕ್ಕೆ ಪಡೆದಿದ್ದಾರೆ.

ಸಂಸತ್ತಿನ ಕಟ್ಟಡದ ಹೊರಗೆ ರಾಜಕಾರಣಿಗಳು ಮತ್ತು ಪಕ್ಷದ ಕಾರ್ಯಕರ್ತರು ಜಮಾಯಿಸಿದ್ದರು. ಹಲವರು ರಸ್ತೆಗಳಲ್ಲಿ ಕುಳಿತಿದ್ದರು. ಧ್ವಜಗಳು ಮತ್ತು ಬ್ಯಾನರ್‌ಗಳನ್ನು ಹಿಡಿದು ಘೋಷಣೆ ಕೂಗುತ್ತಾ ಬ್ಯಾರಿಕೇಡ್ ತಳ್ಳಲು ಮುಂದಾದರು.

ಸಂಸತ್ ಭವನದ ಹೊರಗೆ ಭಾರಿ ಭದ್ರತೆ ಕಲ್ಪಿಸಲಾಗಿತ್ತು. ಆದರೆ ಪ್ರತಿಭಟನೆಗೆ ಅನುಮತಿ ಪಡೆಯದ ಹಿನ್ನೆಲೆ ಎಲ್ಲರನ್ನೂ ವಶಕ್ಕೆ ಪಡೆಯಲಾಯಿತು.

Dakshina Kannada: ಧರ್ಮಸ್ಥಳ ಪದ್ಮಲತಾ ಕೇಸ್‌ ಮರುತನಿಖೆಗೆ ಇನ್ನೊಂದು ದೂರು