Home News Chikkamagaluru : ಕೊನೆಗೂ 6 ಮಂದಿ ನಕ್ಸಲರು ಬಳಸುತ್ತಿದ್ದ ಶಸ್ತ್ರಾಸ್ತ್ರಗಳು ಪತ್ತೆ, ವಶಕ್ಕೆ ಪಡೆದ ಪೊಲೀಸ್!!...

Chikkamagaluru : ಕೊನೆಗೂ 6 ಮಂದಿ ನಕ್ಸಲರು ಬಳಸುತ್ತಿದ್ದ ಶಸ್ತ್ರಾಸ್ತ್ರಗಳು ಪತ್ತೆ, ವಶಕ್ಕೆ ಪಡೆದ ಪೊಲೀಸ್!! ಏನೆಲ್ಲಾ ಬಳಸತಿದ್ರು ಗೊತ್ತಾ ?

Hindu neighbor gifts plot of land

Hindu neighbour gifts land to Muslim journalist

Chikkamagaluru : ಕರ್ನಾಟಕದ ಇತಿಹಾಸದಲ್ಲೇ ಮೊದಲೆಂಬಂತೆ ಇತ್ತೀಚಿಗೆ ಆರು ಜನ ನಕ್ಸಲೆಟ್ ಗಳು ತಮ್ಮೆಲ್ಲ ಕೃತ್ಯಗಳನ್ನು ಬಿಟ್ಟು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸಮ್ಮುಖದಲ್ಲಿ ಶರಣಾಗತಿಯಾಗಿ ಬಂಧನಕೊಳಗಾದರು. ಆದರೆ ಈ ಬೆನ್ನಲ್ಲೇ ಅವರು ತಮ್ಮ ಶಸ್ತ್ರಾಸ್ತ್ರಗಳನ್ನೆಲ್ಲ ಏನು ಮಾಡಿದರು? ಎಂಬುದಾಗಿ ನಾಡಿನ ಜನರು ಚಿಂತಿಸುತ್ತಿದ್ದರು. ಇದೀಗ ಆರು ನಕ್ಸಲರು ಶರಣಾಗತರಾದ ಬೆನ್ನಲ್ಲೇ ಪೊಲೀಸರು ಅರಣ್ಯದಲ್ಲಿ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ.

ಹೌದು, ನಕ್ಸಲರು ಶರಣಾಗತಿಗೂ ಮುನ್ನ ಮೇಗೂರು ಅರಣ್ಯದಲ್ಲಿ ಅಡಗಿದ್ದರು. ಶರಣಾಗುವ ದಿನ ಮೇಗೂರು ಅರಣ್ಯದಲ್ಲೇ ಕೊನೆಯಬಾರಿಗೆ ಸಭೆ ನಡೆಸಿದ್ದರು. ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದೆ ಶರಣಾಗಿದ್ದರು. ಶರಣಾಗತಿ ವೇಳೆ ಶಸ್ತ್ರಾಸ್ತ್ರ ಹಸ್ತಾಂತರವಾಗ ಬಗ್ಗೆ ಚರ್ಚೆಯಾಗಿತ್ತು. ಈ ಹಿನ್ನೆಲೆಯಲ್ಲಿ ಕೊಪ್ಪ ಠಾಣೆ ಇನ್ಸ್​ಪೆಕ್ಟರ್​​ ಮಂಜುನಾಥ್ ನೇತೃತ್ವದ ತಂಡ ಕಳೆದ ಎರಡು ದಿನಗಳಿಂದ ಹುಡುಕಾಟ ನಡೆಸಿ ಶಸ್ತ್ರಾಸ್ತ್ರಗಳನ್ನು ಪತ್ತೆಹಚ್ಚಿದೆ. ನಕ್ಸಲರು ಕೊನೆಯಬಾರಿಗೆ ಸಭೆ ನಡೆಸಿದ್ದ ಸ್ಥಳದಲ್ಲೇ ಶಸ್ತ್ರಾಸ್ತ್ರಗಳು ಪತ್ತೆಯಾಗಿವೆ ಎಂದು ಪೊಲೀಸ್​ ಮೂಲಗಳಿಂದ ಮಾಹಿತಿ ದೊರೆತಿದೆ.

ಯಾವೆಲ್ಲಾ ಶಾಸ್ತ್ರಸ್ತ್ರಗಳು ವಶ?
ಒಂದು ಎ.ಕೆ-56, ಮೂರು 303 ರೈಫಲ್, 12 ಬೋರ್ ಎಸ್ ಬಿಬಿಎಲ್, ಒಂದು ಸ್ವದೇಶ ನಿರ್ಮಿತ ಬಂದೂಕು ಪತ್ತೆಯಾಗಿದೆ. ಅಲ್ಲದೆ 7.62 ಎಂಎಂ ಎ.ಕೆ. ಮದ್ದುಗುಂಡು-11, 303- ರೈಫಲ್ ಮದ್ದುಗುಂಡು – 133, 12 ಬೋರ್ ಕಾರ್ಟ್ರಿಡ್ಜಸ್ – 24, ಸ್ವದೇಶ ನಿರ್ಮಿತ ಪಿಸ್ತೂಲ್ ಮದ್ದುಗುಂಡುಗಳು – 8 ಸೇರಿ ಒಟ್ಟು 176 ಮದ್ದುಗುಂಡು, ಎ.ಕೆ-56 ಖಾಲಿ ಮ್ಯಾಗ್ಜಿನ್ – 01 ಸಿಕ್ಕಿವೆ. ಈ ಬಗ್ಗೆ ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಮ ಅಮಟೆ ತಿಳಿಸಿದ್ದಾರೆ.