Home News Weather Forecast: ಕರ್ನಾಟಕದ ಹವಾಮಾನ ಹೇಗಿದೆ? ಗುಡುಗು ಸಹಿತ ಮಳೆಯ ಮುನ್ಸೂಚನೆ

Weather Forecast: ಕರ್ನಾಟಕದ ಹವಾಮಾನ ಹೇಗಿದೆ? ಗುಡುಗು ಸಹಿತ ಮಳೆಯ ಮುನ್ಸೂಚನೆ

Hindu neighbor gifts plot of land

Hindu neighbour gifts land to Muslim journalist

Weather Forecast: ಕಾಸರಗೋಡು ಜಿಲ್ಲೆಯ ಕಡಲ ತೀರ ಭಾಗಗಳ ಸುತ್ತಮುತ್ತ ಅಲ್ಲಲ್ಲಿ ರಾತ್ರಿ ಸಾಮಾನ್ಯ ಮಳೆಯ ಸಾಧ್ಯತೆ ಇದ್ದರೆ, ದಕ್ಷಿಣ ಕನ್ನಡ(Dakshina Kannada) ಹಾಗೂ ಉಡುಪಿ(Udupi) ಜಿಲ್ಲೆಗಳ ಘಟ್ಟದ ಕೆಳಗಿನ ತಾಲೂಕು ಪ್ರದೇಶಗಳ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ ಗುಡುಗು ಸಹಿತ ಮಳೆಯ(Thunder & Rain) ಮುನ್ಸೂಚನೆ ಇದೆ. ಗಾಳಿಯ ಪ್ರಭಾವ ಹೆಚ್ಚಿದ್ದರೆ, ಪುತ್ತೂರು, ಬಂಟ್ವಾಳ ತನಕವೂ ಮಳೆಯ ಸಾಧ್ಯತೆ ಇದೆ. ಈಗಿನಂತೆ ಒಕ್ಟೊಬರ್ 24ರಂದು ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದು, 25ರಿಂದ ಮಳೆಯ ಸಾಧ್ಯತೆ ಕಾಣುತ್ತಿಲ್ಲ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿಯೇ ಇರಬಹುದು. ಈಗಿನಂತೆ ಒಕ್ಟೊಬರ್ 24ರಂದು ಸಾಮಾನ್ಯ ಮಳೆಯ ಸಾಧ್ಯತೆ ಇದ್ದು, 25ರಿಂದ ಮಳೆ ಸಂಪೂರ್ಣ ಕಡಿಮೆಯಾಗುವ ಸಾಧ್ಯತೆಗಳಿವೆ.

ಒಳನಾಡು : ಉತ್ತರ ಒಳನಾಡಿನ ಹಾವೇರಿ, ಧಾರವಾಡ, ಬೆಳಗಾವಿ, ಗದಗ, ದಾವಣಗೆರೆ ಹಾಗೂ ಬಳ್ಳಾರಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡ ಮಾತ್ರ ಇರಬಹುದು.

ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದ್ದರೆ, ಚಿಕ್ಕಬಳ್ಳಾಪುರ, ತುಮಕೂರು ( ಪಾವಗಢ ಮಳೆ ಸ್ವಲ್ಪ ಜಾಸ್ತಿ ಇರಬಹುದು), ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಉತ್ತರ ಒಳನಾಡಿನಲ್ಲಿ ಒಕ್ಟೊಬರ್ 24 ರಿಂದ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಒಕ್ಟೊಬರ್ 25ರಿಂದ ಮಳೆ ಸಂಪೂರ್ಣ ಕಡಿಮೆಯಾಗುವ ಲಕ್ಷಣಗಳಿವೆ.

ಬಂಗಾಳಕೊಲ್ಲಿಯ ಡಾನಾ ಚಂಡಮಾರುತವು ಒಕ್ಟೊಬರ್ 24ರ ರಾತ್ರಿ ಪಶ್ಚಿಮ ಬಂಗಾಳ ಹಾಗೂ ಒಡಿಸ್ಸಾ ಕರಾವಳಿಗೆ ಅಪ್ಪಳಿಸುವ ಸಾಧ್ಯತೆಗಳಿವೆ. ಇದರೊಂದಿಗೆ ಹಿಂಗಾರು ಸಂಪೂರ್ಣ ದುರ್ಬಲಗೊಳ್ಳಲಿದೆ. ಈಗಿನಂತೆ ಒಕ್ಟೊಬರ್ 28ರಿಂದ ರಾಜ್ಯದ ಕೆಲವು ಭಾಗಗಳಲ್ಲಿ ಅಧಿಕ ತಾಪಮಾನದ ಕಾರಣದಿಂದ ಮಳೆ ಆರಂಭವಾಗುವ ಸಾಧ್ಯತೆಗಳಿವೆ.