ಶನಿವಾರ, 24 ಅಕ್ಟೋಬರ್ 2026

Weather Forecast: ಕರ್ನಾಟಕದ ಹವಾಮಾನ ವರದಿ: ಅ.26ರಿಂದ ಬಿಸಿಲಿನ ವಾತಾವರಣದ ಮುನ್ಸೂಚನೆ

Weather Forecast: ಕಳೆದ ಮೂರು ನಾಲ್ಕು ದಿನಗಳ ಕಾಲ ರಾಜ್ಯದ(State) ಉತ್ತರ ಕರಾವಳಿ(Coastal), ಶಿವಮೊಗ್ಗ ಭಾಗಗಳಲ್ಲಿ ರಾತ್ರಿ ಅನಿರೀಕ್ಷಿತ ಭಾರಿ ಪ್ರಮಾಣದಲ್ಲಿ ಮಳೆಯಾಗಿದೆ(Heavy Rain).

Weather Forecast: ಕಳೆದ ಮೂರು ನಾಲ್ಕು ದಿನಗಳ ಕಾಲ ರಾಜ್ಯದ(State) ಉತ್ತರ ಕರಾವಳಿ(Coastal), ಶಿವಮೊಗ್ಗ ಭಾಗಗಳಲ್ಲಿ ರಾತ್ರಿ ಅನಿರೀಕ್ಷಿತ ಭಾರಿ ಪ್ರಮಾಣದಲ್ಲಿ ಮಳೆಯಾಗಿದೆ(Heavy Rain). ಅರಬ್ಬಿ ಸಮುದ್ರದ(Arabian sea) ಕರಾವಳಿ ತೀರದಲ್ಲಿ ಗಾಳಿಯ ತಿರುಗುವಿಕೆಯ ಪರಿಣಾಮದಿಂದ ಈ ಮಳೆ ಇದ್ದಿರಬಹುದು. ಇವತ್ತು ಈಗಿನಂತೆ ಅಂತಹ ಗಾಳಿಯ ಚಲನೆ ಕಾಣಿಸುತ್ತಿಲ್ಲವಾದ್ದರಿಂದ ಭಾರಿ ಮಳೆಯ ಸಾಧ್ಯತೆ ಕಡಿಮೆ ಇರಬಹುದು.

ಕರಾವಳಿ : ಕಾಸರಗೋಡು ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಮಳೆಯ ಸಾಧ್ಯತೆ ಕ್ಷೀಣಿಸುತ್ತಿದೆ. ದಕ್ಷಿಣ ಕನ್ನಡದ ಸುಳ್ಯ, ಸುಬ್ರಮಣ್ಯ, ಬೆಳ್ತಂಗಡಿ ಸುತ್ತಮುತ್ತ ಭಾಗಗಳಲ್ಲಿ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಒಕ್ಟೊಬರ್ 25ರಿಂದ ಮಳೆ ಕಡಿಮೆಯಾಗಿ 26ರಿಂದ ಹೆಚ್ಚಿನ ಅವಧಿಯೂ ಬಿಸಿಲಿನ ವಾತಾವರಣ ಇರಬಹುದು.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಒಕ್ಟೊಬರ್ 25ರಿಂದ ಮಳೆ ಕಡಿಮೆಯಾಗಲಿದ್ದು, ಹೆಚ್ಚಿನ ಅವಧಿಯೂ ಬಿಸಿಲಿನ ವಾತಾವರಣದ ಲಕ್ಷಣಗಳಿವೆ.

ಒಳನಾಡು : ಹಿಂಗಾರು ಮಾರುತಗಳ ದಿಕ್ಕು ಬದಲಾಗಿದ್ದರಿಂದ ಒಳನಾಡು ಭಾಗಗಳಲ್ಲಿ ಭಾರಿ ಮಳೆಯಾಗುತ್ತಿದೆಯೇ? ಮಾರುತಗಳು ಆಗ್ನೇಯದಿಂದ ವಾಯವ್ಯಕ್ಕೆ (ಸಾಂಪ್ರದಾಯಿಕವಾಗಿ ಈಶಾನ್ಯದಿಂದ ನೈರುತ್ಯಕ್ಕೆ) ಚಲಿಸುತ್ತಿವೆ.

ಹಾವೇರಿ, ಧಾರವಾಡ, ಬೆಳಗಾವಿ, ಗದಗ, ದಾವಣಗೆರೆ, ಬಳ್ಳಾರಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಬಾಗಲಕೋಟೆ, ವಿಜಯಪುರ, ಕೊಪ್ಪಳ, ರಾಯಚೂರು, ಯಾದಗಿರಿ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು (ಪಾವಗಢ ಸಹಿತ) ಚಿತ್ರದುರ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ರಾತ್ರಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ.

ಈಗಿನಂತೆ ಡಾನಾ ಚಂಡಮಾರುತವು ಒಕ್ಟೊಬರ್ 24ರಂದು ಪಶ್ಚಿಮ ಬಂಗಾಳ ಹಾಗೂ ಒಡಿಸ್ಸಾ ಕರಾವಳಿಗೆ ಅಪ್ಪಳಿಸುವ ಸಾಧ್ಯತೆಗಳಿವೆ. ಈ ಸಂದರ್ಭದಲ್ಲಿ ಉತ್ತರ ಒಳನಾಡಿನಲ್ಲಿ ಒಕ್ಟೊಬರ್ 24ರಿಂದ ಹಾಗೂ ದಕ್ಷಿಣ ಒಳನಾಡಿನಲ್ಲಿ ಒಕ್ಟೊಬರ್ 25ರಿಂದ ಮಳೆ ಕಡಿಮೆಯಾಗಿ ಹೆಚ್ಚಿನ ಅವಧಿಯೂ ಬಿಸಿಲಿನ ವಾತಾವರಣದ ಸಾಧ್ಯತೆ ಇದೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ