Home News Karnataka Budget 2025: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗೆ ಬಜೆಟ್ ನಲ್ಲಿ ಸಿಕ್ಕಿದ್ದೇನು?

Karnataka Budget 2025: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗೆ ಬಜೆಟ್ ನಲ್ಲಿ ಸಿಕ್ಕಿದ್ದೇನು?

Hindu neighbor gifts plot of land

Hindu neighbour gifts land to Muslim journalist

Karnataka Budget 2025: ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಎರಡನೇ ಬಜೆಟ್ ಇಂದು ಮಂಡನೆಯಾಗಿದೆ. ಇದು ಸಿದ್ದರಾಮಯ್ಯ ಅವರು ಮಂಡಿಸುತ್ತಿರುವ ದಾಖಲೆಯ 16ನೇ ಬಜೆಟ್ ಆಗಿದ್ದು 4 ಲಕ್ಷ ಕೋಟಿ ಗಾತ್ರವನ್ನು ಹೊಂದಿದೆ. ಕೃಷಿ, ಶಿಕ್ಷಣ, ಅಲ್ಪಸಂಖ್ಯಾತರು, ಮಹಿಳೆಯರು ಸೇರಿದಂತೆ ಅನೇಕ ಕ್ಷೇತ್ರಗಳಿಗೆ ಬಜೆಟ್ ನಲ್ಲಿ ಭರ್ಜರಿ ಕೊಡುಗೆ ಸಿಕ್ಕಿದೆ. ಹಾಗಾದರೆ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಈ ಬಜೆಟ್ ನಲ್ಲಿ ಸಿಕ್ಕಿದ್ದೇನು?

* ಪುತ್ತೂರಿನಲ್ಲಿ ಹೊಸ ವೈದ್ಯಕೀಯ ಕಾಲೇಜು:

ಪುತ್ತೂರಿನಲ್ಲಿ ಹೊಸ ವೈದ್ಯಕೀಯ ಕಾಲೇಜನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ. ಇದಕ್ಕಾಗಿ ಈಗಿರುವ 100 ಹಾಸಿಗೆ ಸಾಮರ್ಥ್ಯದ ತಾಲೂಕು ಆಸ್ಪತ್ರೆಗಳನ್ನು ಉನ್ನತೀಕರಿಸಲು ಪ್ರಸಕ್ತ ವರ್ಷದಲ್ಲಿ ಕ್ರಮ ವಹಿಸಲಾಗುವುದು.

*ಬಯಲುಸೀಮೆ, ಮಲೆನಾಡು ಹಾಗೂ ಕರಾವಳಿ ಪ್ರದೇಶಾಭಿವೃದ್ಧಿ ಮಂಡಳಿಗಳಿಗೆ ಒಟ್ಟಾರೆಯಾಗಿ 83 ಕೋಟಿ ರೂ. ಅನುದಾನವನ್ನು ಒದಗಿಸಲಾಗುವುದು.

* ಕಡಲು ಕೊರೆತ ತಡೆಗೆ ಕ್ರಮ :

ಪ್ರತಿ ವರ್ಷವೂ ಮುಂಗಾರು ಮಳೆಯ ಸಮಯದಲ್ಲಿ ಕರಾವಳಿ ತೀರದಲ್ಲಿ ಕಡಲು ಕೊರೆತದ ಘಟನೆಗಳು ಸಂಭವಿಸುವುದನ್ನು ತಡೆಗಟ್ಟಲು ಈ ಕೆಳಕಂಡ ಕ್ರಮಗಳನ್ನು ಕೈಗೊಳ್ಳಲಾಗುವುದು.

ಕಡಲು ಕೊರೆತದ ಪರಿಣಾಮಗಳನ್ನು ಸಮಗ್ರವಾಗಿ ಎದುರಿಸಲು ಶೋರ್‌ಲೈನ್ ಮ್ಯಾನೇಜ್‌ಮೆಂಟ್‌ ಪ್ಲಾನ್‌ ಅನ್ನು ಚೆನ್ನೈ ಐ.ಐ.ಟಿ ವತಿಯಿಂದ ತಯಾರಿಸಲಾಗಿದೆ. ವರದಿಯಲ್ಲಿನ ಕಡಲು ಕೊರೆತದ ತಡೆಗಟ್ಟುವ ಕಾಮಗಾರಿಗಳನ್ನು ಹಂತ ಹಂತವಾಗಿ ಕೈಗೆತ್ತಿಕೊಳ್ಳಲಾಗುವುದು. ರಾಷ್ಟ್ರೀಯ ವಿಪತ್ತು ಉಪಶಮನ ನಿಧಿಯಡಿ 200 ಕೋಟಿ ರೂ. ಖರ್ಚು ಮಾಡಲಾಗುವುದು.

* ದಕ್ಷಿಣ ಕನ್ನಡ ಜಿಲ್ಲೆಯ ಪಿಲಿಕುಳದಲ್ಲಿ ಭಾರತ್ ಸ್ಕೌಟ್ಸ್‌ ಮತ್ತು ಗೈಡ್ಸ್‌ ಅಂತಾರಾಷ್ಟ್ರೀಯ ಯುವಕರ ತರಬೇತಿ ಕೇಂದ್ರದ ಅಭಿವೃದ್ಧಿಗಾಗಿ ಎರಡು ಕೋಟಿ ರೂ. ಒದಗಿಸಲಾಗುವುದು.

ಮಂಗಳೂರಿನಲ್ಲಿ ಜಲಸಾರಿಗೆ ಸಂಗ್ರಹಾಲಯ:

ಮಂಗಳೂರಿನಲ್ಲಿ ಜಲಸಾರಿಗೆ ಸಂಗ್ರಹಾಲಯ ಮತ್ತು ಅನುಭವ ಕೇಂದ್ರವನ್ನು ಪಿಪಿಪಿ ಮಾದರಿಯಲ್ಲಿ ಸ್ಥಾಪಿಸಲಾಗುವುದು.

* ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಬೊಳುವಾರು ಮೊಹಮ್ಮದ್‌ ಕುಂಞಿ ಅವರ ‘ಸ್ವಾತಂತ್ರ್ಯದ ಓಟ’ ಕಾದಂಬರಿಯನ್ನು ಒಂದು ಕೋಟಿ ರೂ. ವೆಚ್ಚದಲ್ಲಿ ನಾಟಕ ರೂಪದಲ್ಲಿ ನಿರ್ಮಾಣ ಮಾಡಿ ರಾಜ್ಯಾದ್ಯಂತ ಪ್ರದರ್ಶಿಸಲಾಗುವುದು.

*ಎತ್ತಿನಹೊಳೆಗೆ 533 ಕೋಟಿ:

ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯಡಿ ನೀರನ್ನು ಮೇಲೆತ್ತಿ ಗುರುತ್ವಾ ಕಾಲುವೆಯ ಸರಪಳಿ: 32.5 ಕಿ.ಮೀ ವರೆಗೆ ಹರಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ ಎಲ್ಲಾ ಎಂಟು ವಿಯರ್‌ಗಳಲ್ಲಿ ಲಭ್ಯವಾಗುವ ನೀರನ್ನು ಗುರುತ್ವಾ ಕಾಲುವೆಯ ಸರಪಳಿ: 241 ಕಿ.ಮೀ ವರೆಗೆ ಹರಿಸಲಾಗುವುದು. ಈ ಯೋಜನೆಯನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಲು ಕ್ರಮಕೈಗೊಳ್ಳಲಾಗುವುದು.