ಸೋಮವಾರ, 26 ಅಕ್ಟೋಬರ್ 2026
Trending

Weather Report: ಕರ್ನಾಟಕದ ಹವಾಮಾನ ಮುನ್ಸೂಚನೆ ಹೇಗಿದೆ? ಎಲ್ಲೆಲ್ಲಿ ಮಳೆಯ ಸೂಚನೆ ಇದೆ?

Weather Report: ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ.

Karnataka Weather Updates

Weather Report: ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಹೆಚ್ಚಿರುವ ಮುನ್ಸೂಚನೆ ಇದೆ.

Sponsored

ಈಗಿನಂತೆ ಮುಂಗಾರು ಮೋಡಗಳ ಚಲನೆಯು ಸಾಂಪ್ರದಾಯಿಕ ಹಾದಿಗೆ ಮರಳುತ್ತಿದ್ದರೂ, ಮುನ್ಸೂಚನೆಯಲ್ಲಿರುವಷ್ಟು ಜೋರು ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ. ಜೂನ್ 18ರಿಂದ ಮುಂಗಾರು ಮತ್ತೆ ದುರ್ಬಲಗೊಂಡು ಮಳೆ ಕಡಿಮೆಯಾಗುವ ಸೂಚನೆಗಳಿವೆ.

Advertisement
Advertisement

ಮಲೆನಾಡು : ಕೊಡಗು ಉತ್ತಮ ಮಳೆಯ ಮುನ್ಸೂಚನೆ ಇದೆ. ಒಂದೆರಡು ಭಾಗಗಳಲ್ಲಿ ಭಾರಿ ಮಳೆಯ ಸಾಧ್ಯತೆಯೂ ಇದೆ. ಹಾಸನ ಸಾಮಾನ್ಯ ಹಾಗೂ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.

ಈಗಿನಂತೆ ಜೂನ್ 15ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಜಾಸ್ತಿ ಇರಬಹುದು. ಜೂನ್ 18ರಿಂದ ತುಂತುರು ಮಳೆಯ ಮುನ್ಸೂಚನೆ ಇದೆ.

ಒಳನಾಡು : ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳಲ್ಲಿ ಉತ್ತಮ ಹಾಗೂ ಗದಗ, ಬಾಗಲಕೋಟೆ, ದಾವಣಗೆರೆ, ಬಳ್ಳಾರಿ, ಕೊಪ್ಪಳ, ರಾಯಚೂರು, ಯಾದಗಿರಿ, ವಿಜಯಪುರ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ತುಮಕೂರು ಹಾಗೂ ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಹಾಗೂ ಬಿಸಿಲಿನ ವಾತಾವರಣದ ಮುನ್ಸೂಚನೆ ಇದೆ.

ಈಗಿನಂತೆ ಜೂನ್ 15ರಿಂದ ಮಳೆಯ ಪ್ರಮಾಣ ಕಡಿಮೆಯಾಗಿ ಜೂನ್ 19ರಿಂದ ಉತ್ತರ ಹಾಗೂ ದಕ್ಷಿಣ ಒಳನಾಡು ಬಹುತೇಕ ಭಾಗಗಳಲ್ಲಿ ಮೋಡ ಹಾಗೂ ಬಿಸಿಲಿನ ವಾತಾವರಣದ ಸಾಧ್ಯತೆಗಳಿವೆ.

Advertisement