Home News Monsoon: ರಾಜ್ಯಕ್ಕೆ ಮುಂಗಾರು ಪ್ರವೇಶ ಯಾವಾಗ? ಯಾವ ಪ್ರದೇಶದಲ್ಲಿ ಎಷ್ಟು ಮಳೆ ಸಾಧ್ಯತೆ?

Monsoon: ರಾಜ್ಯಕ್ಕೆ ಮುಂಗಾರು ಪ್ರವೇಶ ಯಾವಾಗ? ಯಾವ ಪ್ರದೇಶದಲ್ಲಿ ಎಷ್ಟು ಮಳೆ ಸಾಧ್ಯತೆ?

Hindu neighbor gifts plot of land

Hindu neighbour gifts land to Muslim journalist

 

Monson : ರಾಜ್ಯದಲ್ಲಿ ಬಿಸಿಲಿನ ಜಳ ಹೆಚ್ಚಾಗಿದೆ. ಆದರೂ ರಾಜ್ಯದ ಕೆಲವು ಪ್ರದೇಶಗಳಲ್ಲಿ ಅಲ್ಲಲ್ಲಿ ಮಳೆಯಾಗಿದೆ. ಮಳೆರಾಯನ ತಂಪಿಗೆ ಜನ ಕೊಂಚ ನಿಟ್ಟುಸಿರು ಬಿಟ್ಟಿದ್ದಾರೆ. ಆದರೂ ಇನ್ನೂ ಕೂಡ ರಾಜ್ಯಕ್ಕೆ ಮುಂಗಾರು ಮಳೆ ಪ್ರವೇಶವಾಗಿಲ್ಲ. ಹಾಗಿದ್ದರೆ ಮುಂಗಾರು ಮಳೆ ರಾಜ್ಯವನ್ನು ಪ್ರವೇಶಿಸುವುದು ಯಾವಾಗ?

 

 ಅಧಿಕಾರಿಗಳೊಂದಿಗೆ ಸಚಿವ ಕೃಷ್ಣ ಬೈರೇಗೌಡ ಅವರು ಸಭೆ ನಡೆಸಿದ್ದು ಈ ಬಾರಿಯ ಮುಂಗಾರು ಮಳೆ ಬಗ್ಗೆ ಚರ್ಚಿಸಿದ್ದಾರೆ. ಹೌದು, ಸಚಿವ ಕೃಷ್ಣ ಬೈರೇಗೌಡ ಅವರ ಅಧ್ಯಕ್ಷತೆಯಲ್ಲಿ 2025ನೇ ಸಾಲಿನ ಹವಾಮಾನ ಪರಿಸ್ಥಿತಿ ಕುರಿತು ಗುರುವಾರ ನಡೆದ ಸಚಿವ ಬೈರೇಗೌಡ ಸಂಪುಟ ಉಪಸಮಿತಿ ಸಭೆಯಲ್ಲಿ ಈ ಕುರಿತು ಚರ್ಚಿಸಲಾಯಿತು.

 

ಈ ವೇಳೆ ಸಚಿವರಿಗೆ ಮಾಹಿತಿ ನೀಡಿದ ಅಧಿಕಾರಿಗಳು, ಕಳೆ ಬಾರಿ ಪೂರ್ವ ಮುಂಗಾರಿನಲ್ಲಿ ಉತ್ತರ ಕರ್ನಾಟಕ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ವಾಡಿಕೆಗಿಂತ ಅಧಿಕ ಮಳೆಯಾಗಿದೆ ಹೇಳಿದರು. ಪ್ರಸ್ತುತ ವರ್ಷದ ಮುಂಗಾರು ವೇಳೆ ಮಳೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ವಾಡಿಕೆಗಿಂತ ಅಧಿಕ ಮಳೆಯಾಗುವ ಸಾಧ್ಯತೆಯಿದೆ. ಜೂನ್- ಸೆಪ್ಟೆಂಬರ್ ಅವಧಿಯಲ್ಲಿ ಮಾನ್ಸೂನ್ ಚುರುಕು ಪಡೆಯಲಿದೆ. ಏಪ್ರಿಲ್-ಮೇ ತಿಂಗಳುನಲ್ಲೂ ಉತ್ತಮ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿದು ಬಂದಿದೆ.

 

ಅಲ್ಲದೆ ಈ ಬಾರಿ ಏಪ್ರಿಲ್-ಮೇ ತಿಂಗಳಲ್ಲಿ ಕರಾವಳಿ ಭಾಗದಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆಯಿದೆ. ಆದರೆ, ಜೂನ್‌ನಿಂದ ಸೆಪ್ಟೆಂಬರ್‌ವರೆಗಿನ ಮುಂಗಾರು ಅವಧಿಯಲ್ಲಿ ವಾಡಿಕೆಗಿಂತ ಅಧಿಕ ಮಳೆ ಆಗಲಿದ್ದು, ಕೃಷಿ ಚಟುವಟಿಕೆಗಳೂ ಚುರುಕುಗೊಳ್ಳಲಿವೆ ಎಂದು ಮಾಹಿತಿ ನೀಡಿದರು. ಮುಂದುವರೆದು ಸೆಪ್ಟೆಂಬರ್ ನಂತರದ ಹಿಂಗಾರಿನಲ್ಲೂ ಈ ವರ್ಷ ವಾಡಿಕೆಯ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ.