ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ, ಪ್ರಧಾನಿ ನರೇಂದ್ರ ಮೋದಿ ಪ್ರಸ್ತುತ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರಿಗೆ ಶಿಕ್ಷಣ ಸಚಿವಾಲಯದ ಹೆಚ್ಚುವರಿ ಜವಾಬ್ದಾರಿಗಳನ್ನು ನೀಡಿದ್ದಾರೆ. ಸದ್ಯ ಜೋಶಿ ಅವರು ನಿರ್ವಹಿಸುತ್ತಿರುವ ಸಚಿವಾಲಯಗಳೊಂದಿಗೆ ಶಿಕ್ಷಣ ಇಲಾಖೆಯ ಹೆಚ್ಚುವರಿ ಜವಾಬ್ದಾರಿಯನ್ನು ತೆಗೆದುಕೊಂಡಿದ್ದಾರೆ. ಆದ್ರೆ ಈ ಸ್ಥಾನಕ್ಕೆ ಜೋಶಿಯವರನ್ನೇ ಮೋದಿ ಸೆಲೆಕ್ಟ್ ಮಾಡಿದ್ದು ಯಾಕೆ ಅನ್ನೋ ಕುತೂಹಲ ಹಲವರಲ್ಲಿ ಮೂಡಿದೆ. ಅದಕ್ಕೆ ಇಲ್ಲಿದೆ ನೋಡಿ ಉತ್ತರ.
ಪ್ರಲ್ಹಾದ್ ಜೋಶಿ ಧಾರವಾಡ ಲೋಕಸಭಾ ಕ್ಷೇತ್ರದಿಂದ ಸತತ 5 ಬಾರಿ ಗೆದ್ದು ಸಂಸದರಾಗಿದ್ದಾರೆ. ಮೋದಿ ಕ್ಯಾಬಿನೆಟ್ನಲ್ಲಿ ಹಲವು ಜವಾಬ್ದಾರಿ ನಿರ್ವಹಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ಹೈಕಮಾಂಡ್ನ ಅತ್ಯಂತ ವಿಶ್ವಾಸಾರ್ಹ ನಾಯಕನಾಗಿ ಗುರುತಿಸಿಕೊಂಡಿದ್ದಾರೆ. ಇತ್ತ ಆರ್ಎಸ್ಎಸ್ ಕಟ್ಟಾಳುವಾಗಿರುವ ಕಾರಣ ಸಂಘ ಪರಿವಾರದ ಸಂಪೂರ್ಣ ಬೆಂಬಲ ಪ್ರಲ್ಹಾದ್ ಜೋಶಿಗಿದೆ. ಸಂಸದೀಯ ವ್ಯವಹಾರಗಳ ಸಚಿವರಾಗಿ ಕಾರ್ಯನಿರ್ವಹಿಸಿದ ಅನುಭವ ಹೊಂದಿರುವ ಜೋಶಿ, ವಿರೋಧ ಪಕ್ಷಗಳ ಕಠಿಣ ಸವಾಲುಗಳನ್ನು ಮತ್ತು ಬಿಕ್ಕಟ್ಟುಗಳನ್ನು ಜಾಣ್ಮೆಯಿಂದ ಎದುರಿಸುವಲ್ಲಿ ಎತ್ತಿದ ಕೈ . ಕೇಂದ್ರ ಸರ್ಕಾರ ಹಾಗೂ ವಿದ್ಯಾರ್ಥಿ ಸಂಘಟನೆಗಳ ನಡುವೆ ವಿಶ್ವಾಸವನ್ನು ಮರುಸ್ಥಾಪಿಸಲು ಜೋಶಿ ಅವರಂತಹ ಅನುಭವಿ ಸಚಿವರೇ ಸೂಕ್ತ ಎಂಬುದು ಮೋದಿ ಸೇರಿದಂತೆ ಬಿಜೆಪಿ ಹೈಕಮಾಂಡ್ ನಿರ್ಧಾರವಾಗಿತ್ತು. ಹೀಗಾಗಿ ಜೋಶಿ ಇದಕ್ಕೆ ಫಿಟ್ ಎಂದು ಅವರನ್ನೇ ನೇಮಿಸಲಾಗಿದೆ.




