ನಿನ್ನೆ (ಆ 4) ರಂದು ಡಿ ಕೆ ಶಿವಕುಮಾರ್ ಅವರ ಸರ್ಕಾರದ ನೂತನ 19 ಸಚಿವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ಸಮಾರಂಭಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಗೈರಾಗಿದ್ದರು. ಇದು ಚರ್ಚೆಗೆ ಕರಾಣವಾಗಿತ್ತು. ಇದರ ಬೆನ್ನಲ್ಲೇ ಸಿಎಂ ಡಿ.ಕೆ ಶಿವಕುಮಾರ್ ಸಿದ್ದರಾಮಯ್ಯ ಯಾಕೆ ಕಾರ್ಯಕ್ರಮಕ್ಕೆ ಬಂದಿಲ್ಲ ಎಂದು ಕಾರಣ ಬಿಚ್ಚಿಟ್ಟಿದ್ದಾರೆ.

ವಿಧಾನಸೌಧದಲ್ಲಿ ಮಾಧ್ಯಮ ಮಿತ್ರ ಜೊತೆ ಮಾತನಾಡಿದ ಸಿಎಂ ಡಿಕೆ ಶಿವಕುಮಾರ್ ಅವರು ಸಚಿವರ ಪಟ್ಟಿಯನ್ನು ನಾನು ಮತ್ತು ಸಿದ್ದರಾಮಯ್ಯ ಸೇರಿಯೇ ಸಿದ್ಧಪಡಿಸಿದ್ದೇವೆ ಆದರೆ ಸಿದ್ದರಾಮಯ್ಯ ಅವರ ಹುಟ್ಟುಹಬ್ಬವಿದ್ದ ಕಾರಣ ಅವರು ಕಾರ್ಯಕ್ರಮಕ್ಕೆ ಆಗಮಿಸಲು ಆಗಲಿಲ್ಲ ಎಂದು ಕಾರಣ ಬಿಚ್ಚಿಟ್ಟಿದ್ದಾರೆ.
ಕೊನೆ ಕ್ಷಣದಲ್ಲಿ ಸಚಿವರ ಪಟ್ಟಿಯಲ್ಲಿ ಅದಲು-ಬದಲು ವಿಚಾರವಾಗಿ, ಹೈಕಮಾಂಡ್ ಕಳಿಸಿದ ಪಟ್ಟಿಯಂತೆ ಸ್ಥಾನ ಸಿಕ್ಕಿದೆ. ತಾಂತ್ರಿಕ ಸಮಸ್ಯೆಯಾಗಿ ಗಾಯತ್ರಿ ಶಾಂತೇಗೌಡರನ್ನು ಕೈ ಬಿಡಲಾಗಿದೆ ಎಂದು ಸಮರ್ಥಿಸಿಕೊಂಡಿದ್ದಾರೆ.