Home News Maharashtra: MLC ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಬಿಜೆಪಿ ಸೇರಿದ ರಾಹುಲ್ ಗಾಂಧಿ ಪರಮ ಆಪ್ತನ ಪತ್ನಿ

Maharashtra: MLC ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಬಿಜೆಪಿ ಸೇರಿದ ರಾಹುಲ್ ಗಾಂಧಿ ಪರಮ ಆಪ್ತನ ಪತ್ನಿ

Hindu neighbor gifts plot of land

Hindu neighbour gifts land to Muslim journalist

Maharastra: ರಾಹುಲ್ ಗಾಂಧಿ ಅವರ ಪರಮ ಆಪ್ತನ ಪತ್ನಿ, ಕಾಂಗ್ರೆಸ್ ನಾಯಕಿ ಪ್ರಜ್ಞಾ ಸಾತವ್ ಅವರು ಮಹಾರಾಷ್ಟ್ರ ವಿಧಾನ ಪರಿಷತ್‌ (ಎಂಎಲ್‌ಸಿ) ಸದಸ್ಯ ಸ್ಥಾನಕ್ಕೆ ಇಂದು (ಗುರುವಾರ) ರಾಜೀನಾಮೆ ನೀಡಿದ್ದು, ಬಿಜೆಪಿಗೆ ಸೇರಿದ್ಡಾರೆ.

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ಮಹಾರಾಷ್ಟ್ರ ವಿಧಾನ ಪರಿಷತ್‌ಗೆ ನಾಮ ನಿರ್ದೇಶನಗೊಂಡಿದ್ದ ಪ್ರದ್ನ್ಯಾ ಸತವ್ ಎಂಎಲ್‌ಸಿ ಸ್ಥಾನಕ್ಕೂ ರಾಜೀನಾಮೆ ನೀಡಿದ್ದಾರೆ.

ರಾಜ್ಯದ (ಮಹಾರಾಷ್ಟ್ರ) ಮರಾಠವಾಡ ಪ್ರದೇಶದ ಹಿಂಗೋಲಿ ಜಿಲ್ಲೆಯವರು. 2021ರಲ್ಲಿ ಅವರು ಮೊದಲ ಬಾರಿಗೆ ಮಹಾರಾಷ್ಟ್ರ ವಿಧಾನ ಪರಿಷತ್‌ಗೆ ಆಯ್ಕೆಯಾಗಿದ್ದರು. ಪತಿಯ ನಿಧನದ (2021) ನಂತರ, ಪ್ರಜ್ಞಾ ಅವರು ಮಹಾರಾಷ್ಟ್ರ ಪ್ರದೇಶ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು. ಕಳೆದ ವರ್ಷದ ಜುಲೈನಲ್ಲಿ ಅವರನ್ನು ವಿಧಾನ ಪರಿಷತ್‌ಗೆ ಮರುನಾಮಕರಣ ಮಾಡಲಾಗಿತ್ತು. ಅವರ ಅಧಿಕಾರವಧಿ 2030ರಲ್ಲಿ ಕೊನೆಗೊಳ್ಳಬೇಕಿತ್ತು.

ಮಹಾರಾಷ್ಟ್ರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಕೆಲವೇ ದಿನಗಳು ಇರುವಾಗ ಪ್ರದ್ನ್ಯಾ ಸತವ್ ರಾಜೀನಾಮೆ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಭಾರೀ ಹಿನ್ನಡೆ ಉಂಟು ಮಾಡಿದೆ. ರಾಜ್ಯದ 29 ಮಹಾನಗರ ಪಾಲಿಕೆಗಳಿಗೆ 2026ರ ಜನವರಿ 15ರಂದು ಚುನಾವಣೆ ನಡೆಯಲಿದೆ.