ಪ್ರಧಾನಿ ನರೇಂದ್ರ ಮೋದಿ (PM Modi) ನೇತೃತ್ವದ ಎನ್‌ಡಿಎ ಸರ್ಕಾರದಲ್ಲಿ ಶೀಘ್ರ ಸಚಿವ ಸಂಪುಟ ಪುನರ್ ರಚನೆಯಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದ್ದು, ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಅವರ ಖಾತೆ ಬದಲಾಗುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.
Sponsoredಇತ್ತೀಚಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಷ್ಟ್ರಪತಿ ದ್ರೌಪದಿ ಮೂರು ಅವರನ್ನು ಭೇಟಿಯಾಗಿದ್ದರು ಈ ವೇಳೆ ಕೇಂದ್ರ ಸಂಪುಟ ಪುನರ್ ರಚನೆಗೆ ಅನುಮತಿ ಕೋರಿದ್ದಾರೆ ಎನ್ನಲಾಗಿದೆ. ಈ ಸಂಪುಟ ಪುನರ್ ರಚನೆಯಲ್ಲಿ ಹಲವಾರು ಜನ ಸಚಿವರನ್ನು ಕೈ ಬಿಡಲಾಗಿದ್ದು ಮತ್ತು ಹೊಸ ಮುಖಗಳಿಗೆ ಅವಕಾಶ ನೀಡಲಾಗುವುದು ಎಂದು ತಿಳಿದು ಬಂದಿದೆ.
ಅಚ್ಚರಿಯ ಸಂಗತಿ ಏನೆಂದರೆ ಪ್ರಸ್ತುತ ಹಣಕಾಸು ಸಚಿವೆ ಯಾಗಿರುವ ನಿರ್ಮಲ ಸೀತಾರಾಮನ್ ಅವರ ಖಾತೆಯನ್ನು ಬದಲಾಯಿಸಲು ಸರ್ಕಾರ ಮುಂದಾಗಿದ್ದು, ಅವರಿಗೆ ಮಾನವ ಸಂಪನ್ಮೂಲ ಅಭಿವೃದ್ಧಿ ಖಾತೆಯನ್ನು ವಹಿಸುವ ಕುರಿತು ಚಿಂತನೆ ನಡೆದಿದೆ ಎನ್ನಲಾಗಿದೆ. ಆರ್‌ಬಿಐ ಮಾಜಿ ಗವರ್ನರ್ ಶಕ್ತಿಕಾಂತ್ ದಾಸ್ ಅವರನ್ನು ಸಂಪುಟಕ್ಕೆ ಸೇರಿಸಿಕೊಂಡು ಅವರಿಗೆ ಹಣಕಾಸು ಖಾತೆಯನ್ನು ನೀಡುವ ಕುರಿತು ಚಿಂತನೆ ನಡೆಸಲಾಗಿದೆ. ಇದರೊಂದಿಗೆ ಧರ್ಮೇಂದ್ರ ಪ್ರಧಾನ್ ಮತ್ತು ಹರ್ದೀಪ್ ಸಿಂಗ್ ಪುರಿ ಅವರನ್ನು ಸಚಿವ ಸಂಪುಟದಿಂದ ಹೊರಗಿಡ್ತಾರೆ ಎಂಬ ಚರ್ಚೆ ಆಗ್ತಿದೆ.




