ಇನ್ನೊಂದು ತಿಂಗಳೊಳಗೆ ದಕ್ಷಿಣ ಕನ್ನಡ ಮಂಗಳೂರು ಜಿಲ್ಲೆಯಾಗಿ ಮರುನಾಮಕರಣ-ಸಿಎಂ
ದಕ್ಷಿಣ ಕನ್ನಡ ಜಿಲ್ಲೆಯ ಹೆಸರನ್ನು ಅಧಿಕೃತವಾಗಿ ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡಲು ರಾಜ್ಯ ಸರಕಾರ ಮಹತ್ವದ ತೀರ್ಮಾನ ಮಾಡಿದೆ.
Sponsoredಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಡಿಕೆಶಿ ಅವರ ಅಧ್ಯಕ್ಷತೆಯಲ್ಲಿ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಣಯಕ್ಕೆ ಅಧಿಕೃತ ಅನುಮೋದನೆ ನೀಡಲಾಗಿದೆ.
ಬ್ರಿಟಿಷರ ಆಳ್ವಿಕೆಯ ಕಾಲದಿಂದ ಬಳಕೆಯಲ್ಲಿದ್ದ ದಕ್ಷಿಣ ಕನ್ನಡ ಎಂಬ ಹೆಸರಿನ ಬದಲಿಗೆ ಜಿಲ್ಲಾ ಕೇಂದ್ರವಾದ ಮಂಗಳೂರಿನ ಹೆಸರಿನಲ್ಲೇ ಇಡೀ ಜಿಲ್ಲೆಯನ್ನು ಗುರುತಿಸಬೇಕೆನ್ನುವುದು ಹಲವು ವರ್ಷಗಳ ಕೂಗಾಗಿತ್ತು.
ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆಯೆಂದು ಮರುನಾಮಕರಣ ಮಾಡುವ ಪ್ರಕ್ರಿಯೆಯನ್ನು ಇನ್ನೊಂದು ತಿಂಗಳೊಳಗೆ ಪೂರ್ಣಗೊಳಿಸಲಾಗುವುದು.




