Home News Mangaluru : ಮಾಟ, ಮಂತ್ರ ನಿವಾರಿಸುವುದಾಗಿ ಮಹಿಳೆಗೆ 1.5 ಲಕ್ಷ ವಂಚನೆ, ಕಿರುಕುಳ – ...

Mangaluru : ಮಾಟ, ಮಂತ್ರ ನಿವಾರಿಸುವುದಾಗಿ ಮಹಿಳೆಗೆ 1.5 ಲಕ್ಷ ವಂಚನೆ, ಕಿರುಕುಳ – ಗುರುವಾಯನಕೆರೆಯ ‘ಕೂಳೂರು ಉಸ್ತಾದ್’ ಬಂಧನ!!

Hindu neighbor gifts plot of land

Hindu neighbour gifts land to Muslim journalist

Mangaluru : ಮಹಿಳೆ ಒಬ್ಬರಿಗೆ ಯಾರೋ ನಿಮಗೆ ಮಾಟ, ಮಂತ್ರವನ್ನು ಮಾಡಿಸಿದ್ದಾರೆ ಅದನ್ನು ನಾನು ನಿವಾರಿಸುತ್ತೇನೆ ಎಂದು ಹೇಳಿಕೊಂಡು ಚಿಕಿತ್ಸೆಯ ನೆಪದಲ್ಲಿ ಲೈಂಗಿಕ ಕಿರುಕುಳ ನೀಡಿ, ಒಂದು ಲಕ್ಷ ರೂ.ಗಳನ್ನು ಪಡೆದು ವಂಚಿಸಿದ ಆರೋಪದಲ್ಲಿ ಹೆಜಮಾಡಿಯ ಉಸ್ತಾದ್ ಮಂಗಳೂರು ಮಹಿಳಾ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಗುರುವಾಯನಕೆರೆಯ ನಿವಾಸಿ ಜಿ.ಅಬ್ದುಲ್ ಕರೀಮ್ ಅಲಿಯಾಸ್ ಕೂಳೂರು ಉಸ್ತಾದ್ ಬಂಧಿತ ಆರೋಪಿ. 2022ರಲ್ಲಿ ಸಂತ್ರಸ್ತೆಗೆ ಖಿನ್ನತೆಯ ಸಮಸ್ಯೆ ಉಂಟಾಗಿದ್ದು, ಆಕೆ ತನ್ನ ಅಕ್ಕನ ಗಂಡನ ಸಲಹೆಯಂತೆ ಆಗ ಹೆಜಮಾಡಿಯಲ್ಲಿದ್ದ ಉಸ್ತಾದ್ ಅಬ್ದುಲ್ ಕರೀಮ್ ಮನೆಗೆ ಹೋಗಿದ್ದರು. ಅಲ್ಲಿ ಕೂಳೂರು ಉಸ್ತಾದ್ ಎಂಬ ಹೆಸರಿನ ಈ ಅಬ್ದುಲ್ ಕರೀಮ್ ಎಂಬಾತ ಮಹಿಳೆಯನ್ನು ನೋಡಿ ನಿಮಗೆ ಯಾರೋ ಮಾಟ ಮಂತ್ರ ಮಾಡಿಸಿದ್ದಾರೆ ಎಂದು ನಂಬಿಸಿ ಅದನ್ನು ತೆಗೆಸಬೇಕು ಎಂದು ನಂಬಿಸಿದ್ದಾನೆ.

ಬಳಿಕ ಮಾಟ ಮಂತ್ರ ನಿವಾರಿಸುವ ಚಿಕಿತ್ಸೆ ಕೊಡುತ್ತೇನೆ ಎಂದು ನಂಬಿಸಿ ಆ ಮಹಿಳೆಯನ್ನು ಆಗಾಗ ಬರಲು ತಿಳಿಸಿದ್ದಾನೆ. ಮಹಿಳೆ ತನ್ನ ಅಕ್ಕನ ಜೊತೆ ಈ ವ್ಯಕ್ತಿ ಬಳಿ ಹಲವು ಬಾರಿ ಹೋಗಿದ್ದಾರೆ. 2022, ಫೆ.10 ರಂದು ಸಂತ್ರಸ್ತೆಯ ಅಕ್ಕನಿಗೆ ಕೆಲಸ ಇದ್ದ ಕಾರಣ ಸಂತ್ರಸ್ತೆ ಒಬ್ಬಳೇ ಹೆಜಮಾಡಿ ಮನೆಗೆ ಹೋಗಿದ್ದರೆನ್ನಲಾಗಿದೆ. ಅಲ್ಲಿ ಉಸ್ತಾದ್ ಆಕೆಯಲ್ಲಿ ಕುರ್‌ಆನ್ ಓದಿಸಿ, ಬಳಿಕ ಆಕೆಗೆ ಚಿಕಿತ್ಸೆಯ ನೆಪದಲ್ಲಿ ಮೈಮುಟ್ಟಿ ಕಿರುಕುಳ ನೀಡಿದ್ದಾನೆ ಮತ್ತು ಮಹಿಳೆಯಿಂದ 55,000 ರೂ. ಪಡೆದಿರುವುದಾಗಿ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಮಹಿಳೆ ತಿಳಿಸಿದ್ದಾರೆ.

ತಾನು ಹೆಜಮಾಡಿಗೆ ಹೋದಾಗಲೆಲ್ಲಾ, ತನ್ನಲ್ಲಿ ಚಿಕಿತ್ಸೆಗೆ ಜಾಸ್ತಿ ಹಣ ಖರ್ಚಾಗುತ್ತದೆ ಎಂದು ಉಸ್ತಾದ್ ಹೇಳಿ ತನ್ನನ್ನು ವಂಚಿಸಿ ಸುಮಾರು ಒಂದು ಲಕ್ಷ ರೂ. ಪಡೆದು ವಂಚಿಸಿರುವುದಾಗಿಯೂ ಸಂತ್ರಸ್ತೆ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಆರೋಪಿಸಿದ್ದಾರೆ. ಈ ವ್ಯಕ್ತಿ ಇದೇ ರೀತಿ ಮಾಟ ಮಂತ್ರ ನಿವಾರಿಸುವ ಉಸ್ತಾದ್ ಎಂಬ ಸೋಗಿನಲ್ಲಿ ಇನ್ನೂ ಹಲವರಿಗೆ ವಂಚಿಸಿರುವ ಹಾಗೂ ಕಿರುಕುಳ ನೀಡಿರುವ ಬಗ್ಗೆ ದೂರುಗಳಿವೆ ಎಂದು ತಿಳಿದು ಬಂದಿದೆ. ಸಧ್ಯ ಮಂಗಳೂರು ಮಹಿಳಾ ಪೊಲೀಸ್ ಠಾಣೆಯ ನಿರೀಕ್ಷಕರಾದ ಬಾಲಕೃಷ್ಣ ನಾಯಕ್ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.