Home News Chitradurga : ಮದುವೆಯಾಗಲು ನಿರಾಕರಿಸಿದ ಪ್ರೇಮಿ – ಆತ್ಮಹತ್ಯೆ ಮಾಡಿಕೊಂಡ ಯುವತಿ

Chitradurga : ಮದುವೆಯಾಗಲು ನಿರಾಕರಿಸಿದ ಪ್ರೇಮಿ – ಆತ್ಮಹತ್ಯೆ ಮಾಡಿಕೊಂಡ ಯುವತಿ

Hindu neighbor gifts plot of land

Hindu neighbour gifts land to Muslim journalist

Chitradurga : ಪ್ರೀತಿಸಿದ ಯುವಕನು ಮದುವೆಯಾಗಲು ನಿರಾಕರಿಸಿದ ಕಾರಣಕ್ಕೆ ಯುವತಿ ಒಬ್ಬಳು ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಮೊಳಕಾಲ್ಮುರು ತಾಲೂಕಿನಲ್ಲಿ ಬೆಳಕಿಗೆ ಬಂದಿದೆ.

ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರುತಾಲ್ಲೂಕಿನ ನಾಗಸಮುದ್ರ ಗ್ರಾಮದ ಗ್ರಾಮದ ಯುವತಿ ಅಂಜಲಿ (25) ಎಂಬ ಯುವತಿ ಪ್ರೀತಿಸಿದ ಯುವಕ ಮದುವೆಯಾಗಲು ನಿರಾಕರಿಸಿದ ಎಂಬ ಕಾರಣಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಅಂಜಲಿ ಬೆಂಗಳೂರಿನಲ್ಲಿ ಲ್ಯಾಬ್‌ ಟೆಕ್ನೀಷಿಯನ್‌ ಆಗಿ ಕೆಲಸ ಮಾಡುತ್ತಿದ್ದರು. ಇವರಿಗೆ ತಾಲ್ಲೂಕಿನ ರಾಂಪುರ ಗ್ರಾಮದ ಭಾರ್ಗವ ರೆಡ್ಡಿ ಪರಿಚಯವಾಗಿತ್ತು. ನಂತರ ಇಬ್ಬರೂ ಪ್ರೀತಿಸುತ್ತಿದ್ದರು. ಬಳಿಕ ಭಾರ್ಗವರೆಡ್ಡಿ, ‘ನಿಮ್ಮದು ನಮ್ಮದು ಬೇರೆ ಬೇರೆ ಜಾತಿ. ಮದುವೆಯಾದಲ್ಲಿ ಸಮಸ್ಯೆಯಾಗುತ್ತದೆ’ ಎಂದು ನಿರಾಕರಿಸಿದ್ದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪಾಲಕರು ದೂರಿನಲ್ಲಿ ತಿಳಿಸಿದ್ದಾರೆ.

ಭಾರ್ಗವರೆಡ್ಡಿ ಮತ್ತು ಪಾಲಕರ ವಿರುದ್ಧ ಕ್ರಮ ಕೊಳ್ಳಬೇಕು ಎಂದು ಆಗ್ರಹಿಸಿ ಅಂಜಲಿ ಸಂಬಂಧಿಕರು ಕೆಲಕಾಲ ರಾಂಪುರ ಆಸ್ಪತ್ರೆ ಆವರಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ.