# ನಿವೇಶನಕ್ಕೆ ಅರ್ಜಿ ಕೊಡಲು ಬಂದ ಮಹಿಳೆಗೆ ಕಿರುಕುಳ | ಗ್ರಾ.ಪಂ.ಸದಸ್ಯನ ವಿರುದ್ಧ ಪ್ರಕರಣ ದಾಖಲು

- Link: https://hosakannada.com/news/women-harassment/
- Published: 2021-10-07T19:56:59+00:00
- Author: Praveen Chennavara

ಮಹಿಳೆಯೋರ್ವರಿಗೆ ಕಿರುಕುಳ ನೀಡಿದ ಆರೋಪದಲ್ಲಿ ಮುನ್ನೂರು ಗ್ರಾಪಂ ಸದಸ್ಯನ ವಿರುದ್ಧ ಬುಧವಾರ ಉಳ್ಳಾಲ
ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Sponsored

ಮುನ್ನೂರು ಗ್ರಾಪಂ ಸದಸ್ಯ ಬಾಬು ಶೆಟ್ಟಿ ಪ್ರಕರಣದ ಆರೋಪಿ ಎಂದು ತಿಳಿದು ಬಂದಿದೆ.

Advertisement

Advertisement

ಘಟನೆ ವಿವರ: ನಿವೇಶನ ರಹಿತ ಮಹಿಳೆಯೊಬ್ಬರು ಸೆ.18ರಂದು ಸೈಟ್‌ಗೆ ಅರ್ಜಿ ನೀಡಲೆಂದು ಮುನ್ನೂರು ಗ್ರಾಪಂಗೆ
ತೆರಳಿದ್ದರು.

ಈ ವೇಳೆ ಆರೋಪಿ ಬಾಬು ಅವರನ್ನು ಅಧ್ಯಕ್ಷರ ಕೊಠಡಿಗೆ ಕರೆಸಿ ಕಿರುಕುಳ ನೀಡಿದ ಆರೋಪ ವ್ಯಕ್ತವಾಗಿತ್ತು.
ಈ ಬಗ್ಗೆ ತನಿಖೆ ನಡೆಸುವಂತೆ ಡಿವೈಎಫ್‌ಐ ಮುನ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷರಿಗೆ ಮನವಿ ಸಲ್ಲಿಸಿ
ಒತ್ತಾಯಿಸಿತ್ತು.

ಈ ಹಿನ್ನೆಲೆಯಲ್ಲಿ ಮಹಿಳೆ ಉಳ್ಳಾಲ ಠಾಣೆಯಲ್ಲಿ ಕೆಲವು ದಿನಗಳ ಬಳಿಕ ದೂರು ನೀಡಿದ್ದು, ಪೊಲೀಸರು ಪ್ರಕರಣ
ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Advertisement
