Home latest ಮಹಿಳೆಯ ಸಾಮೂಹಿಕ ಅತ್ಯಾಚಾರ ಮಾಡಿ, ತಲೆಕೂದಲು ಬೋಳಿಸಿ, ಮುಖಕ್ಕೆ ಕಪ್ಪು ಮಸಿ ಬಳಿದು ಮೆರವಣಿಗೆ!!!

ಮಹಿಳೆಯ ಸಾಮೂಹಿಕ ಅತ್ಯಾಚಾರ ಮಾಡಿ, ತಲೆಕೂದಲು ಬೋಳಿಸಿ, ಮುಖಕ್ಕೆ ಕಪ್ಪು ಮಸಿ ಬಳಿದು ಮೆರವಣಿಗೆ!!!

Hindu neighbor gifts plot of land

Hindu neighbour gifts land to Muslim journalist

ಯುವತಿಯೊಬ್ಬಳನ್ನು ಸಾಮೂಹಿಕ ಅತ್ಯಾಚಾರ ಮಾಡಿ, ತಲೆಕೂದಲು ಬೋಳಿಸಿ, ಆಕೆಯ ಮುಖಕ್ಕೆ ಕಪ್ಪು ಮಸಿ ಬಳಿದು ಆಕೆಯನ್ನು ನಡು ರಸ್ತೆಯಲ್ಲಿ ಸಾರ್ವಜನಿಕರ ಎದುರು ಮೆರವಣಿಗೆ ಮಾಡಿದ ಅಮಾನವೀಯ ಘಟನೆ ರಾಷ್ಟ್ರ ರಾಜಧಾನಿಯಲ್ಲಿ ನಡೆದಿದೆ.

ಈ ಪ್ರಕರದ ವೀಡಿಯೋ ಬೆಳಕಿಗೆ ಬರುತ್ತಿದ್ದಂತೇ, ಮಹಿಳೆಯ ಮೇಲೆ ದೌರ್ಜನ್ಯ ನಡೆಸಿದ ನಾಲ್ವರು ಮಹಿಳೆಯರನ್ನು ಬಂಧಿಸಲಾಗಿದೆ ಎಂದು ಮಹಿಳಾ ಆಯೋಗ ಟ್ವೀಟ್ ಮೂಲಕ ತಿಳಿಸಿದೆ.

ಬುಧವಾರ ಈ ಘಟನೆ ನವದೆಹಲಿಯಲ್ಲಿ ನಡೆದಿದೆ. ಈ ಪ್ರದೇಶದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ಆರೋಪಿಗಳು ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ವೀಡಿಯೋದಲ್ಲಿ ಕಂಡು ಬಂದ ನಾಲ್ವರು ಮಹಿಳೆಯರನ್ನು ಬಂಧಿಸಲಾಗಿದೆ. ಲೈಂಗಿಕ ದೌರ್ಜನ್ಯದ ಅಡಿ ಕೇಸು ದಾಖಲಿಸಲಾಗಿದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಈಗಾಗಲೇ ತಂಡ ರಚಿಸಲಾಗಿದೆ. ಶೀಘ್ರವೇ ಎಲ್ಲಾ ಆರೋಪಿಗಳನ್ನು ಬಂಧಿಸುತ್ತೇವೆ ಎಂದು ಉಪಪೊಲೀಸ್ ಆಯುಕ್ತ ಶಹದಾರ, ಆರ್ ಸತ್ಯಸುಂದರಂ ತಿಳಿಸಿದ್ದಾರೆ.

ಸಂತ್ರಸ್ತ ಮಹಿಳೆ ಕಳೆದ ಕೆಲವು ವರ್ಷಗಳಿಂದ ಶಹದಾರ ಪ್ರದೇಶದಲ್ಲಿ ತನ್ನ ಮಗುವಿನೊಂದಿಗೆ ನೆಲೆಸಿದ್ದರು. ಈ ಮಹಿಳೆಯನ್ನು ಪ್ರೀತಿಸುವಂತೆ ಆತನ ನೆರೆಮನೆಯ ವ್ಯಕ್ತಿ ಪೀಡಿಸುತ್ತಿದ್ದ ಎನ್ನಲಾಗಿದೆ. ಆದರೆ ಇದಕ್ಕೆ ಈ ಸಂತ್ರಸ್ತೆ ಯುವತಿ ನಿರಾಕರಿಸಿದ್ದಳು. ಈ ಹಿನ್ನೆಲೆಯಲ್ಲಿ ಆತ ಆತ್ಮಹತ್ಯೆ ಮಾಡಿಕೊಂಡಿದ್ದ ಎಂದು ಐಎಎನ್ಎಸ್ ತನಿಖೆಯ ಗೌಪ್ಯ ಮೂಲ ವರದಿ ಮಾಡಿದೆ.

ಆತನ ಹತ್ಯೆಗೆ ಸಂತ್ರಸ್ತೆ ಮಹಿಳೆ ಕಾರಣ ಎಂದು ಆತ‌ನ ಕುಟುಂಬಸ್ಥರ ಆಕೆ ಮೇಲೆ ಹಲ್ಲೆ ಮಾಡಿದ್ದಾರೆ.

ಸದ್ಯ ಮಹಿಳೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆಕೆ ಚೇತರಿಸಿಕೊಳ್ಳುತ್ತಿದ್ದಾಳೆ. ಪೊಲೀಸರು ಆಕೆಯ ಹೇಳಿಕೆಯನ್ನು ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.