Home News Ravi Kumar : ‘ರಾತ್ರಿಯಿಡೀ ಸರ್ಕಾರಕ್ಕೆ, ಇಡೀ ದಿನ CMಗಾಗಿ ಕೆಲಸ ಮಾಡ್ತಾರೆ’ – ಮುಖ್ಯ...

Ravi Kumar : ‘ರಾತ್ರಿಯಿಡೀ ಸರ್ಕಾರಕ್ಕೆ, ಇಡೀ ದಿನ CMಗಾಗಿ ಕೆಲಸ ಮಾಡ್ತಾರೆ’ – ಮುಖ್ಯ ಕಾರ್ಯದರ್ಶಿ ವಿರುದ್ಧ ಬಿಜೆಪಿ ನಾಯಕ ರವಿಕುಮಾರ್ ಆಕ್ಷೇಪಾರ್ಹ ಹೇಳಿಕೆ

Hindu neighbor gifts plot of land

Hindu neighbour gifts land to Muslim journalist

Ravi Kumar: ಬಿಜೆಪಿ ನಾಯಕ ಎಂ ಎನ್ ರವಿಕುಮಾರ್ ಅವರು ಇತ್ತೀಚಿಗೆ ವಿವಾದಗಳಿಂದಲೇ ಸುದ್ದಿಯಾಗುತ್ತಿದ್ದಾರೆ. ಇದೀಗ ಅವರು ರಾಜ್ಯದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ಅಸಂಸದೀಯ ಪದಗಳನ್ನು ಬಳಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಹೌದು, ಮೂಲಗಳ ಪ್ರಕಾರ ವಿಧಾನಸೌಧದಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವಿಧಾನಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್ ರವಿಕುಮಾರ್ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ಅವರ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ್ದು “ಶಾಲಿನಿ ರಜನೀಶ್ ಅವರು ರಾತ್ರಿಯಿಡೀ ರಾಜ್ಯ ಸರ್ಕಾರಕ್ಕಾಗಿ ಮತ್ತು ಇಡೀ ದಿನ ಮುಖ್ಯಮಂತ್ರಿಗಾಗಿ ಕೆಲಸ ಮಾಡುತ್ತಾರೆ” ಎಂದು ನಾಲಗೆ ಹರಿ ಬಿಟ್ಟಿದ್ದಾರೆ ಎನ್ನಲಾಗಿದೆ.

ಹೀಗಾಗಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ಅಸಂಸದೀಯ ಪದ ಬಳಕೆ ಮಾಡಿದ ಆರೋಪ ಮೇಲೆ ಬಿಜೆಪಿ ಪರಿಷತ್ ಸದಸ್ಯ ಎನ್. ರವಿಕುಮಾರ್ (N Ravikumar) ವಿರುದ್ಧ ಕೆಪಿಸಿಸಿ (KPCC) ಪ್ರಧಾನ ಕಾರ್ಯದರ್ಶಿ ಎಸ್.ಮನೋಹರ್ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಇದನ್ನೂ ಓದಿ: Heart Attack: ಹಾಸನದಲ್ಲಿ ಮುಂದುವರಿದ ಹೃದಯಾಘಾತ – ಮುಂದುವರೆದ ಸರಣಿ ಸಾವು – ಮತ್ತೆ ಮೂವರು ಹೃದಯಾಘಾತಕ್ಕೆ ಬಲಿ