ಸೋಮವಾರ, 26 ಅಕ್ಟೋಬರ್ 2026
Trending

ವಾಣಿ ಶಿಕ್ಷಣ ಸಂಸ್ಥೆಗಳಲ್ಲಿ ವಿಶ್ವ ಪರಿಸರ ದಿನಾಚರಣೆ- ಹಣ್ಣಿನ ಗಿಡ ನೆಟ್ಟು ಪರಿಸರ ಸಂರಕ್ಷಣೆಗೆ ಸಂಕಲ್ಪ

ವಾಣಿ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (NSS) ಹಾಗೂ ರೋವರ್ಸ್ ಮತ್ತು ರೇಂಜರ್ಸ್ ಘಟಕದ ವತಿಯಿಂದ, ಸಾಮಾಜಿಕ ಅರಣ್ಯ ಇಲಾಖೆ ಬೆಳ್ತಂಗಡಿ ಇವರ ಸಹಯೋಗದೊಂದಿಗೆ ವಿಶ್ವ ಪರಿಸರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

Sponsored

ಬೆಳ್ತಂಗಡಿ ಸಾಮಾಜಿಕ ಅರಣ್ಯ ಇಲಾಖೆಯ ಆರ್.ಎಫ್.ಒ. ಲೋಕೇಶ್ ಎಸ್.ಎನ್. ಅವರ ಮಾರ್ಗದರ್ಶನದಲ್ಲಿ ವಾಣಿ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ವಿವಿಧ ಹಣ್ಣಿನ ಗಿಡಗಳನ್ನು ನೆಡುವ ಮೂಲಕ ಪರಿಸರ ಸಂರಕ್ಷಣೆಯ ಸಂದೇಶ ಸಾರಲಾಯಿತು.

Advertisement
Advertisement

ಕಾರ್ಯಕ್ರಮದಲ್ಲಿ ವಾಣಿ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಪಿ.ಕುಶಾಲಪ್ಪ ಗೌಡ, ಗೌರವಾಧ್ಯಕ್ಷರಾದ ಎಚ್. ಪದ್ಮಗೌಡ, ಉಪಾಧ್ಯಕ್ಷರಾದ ನಾರಾಯಣ ಗೌಡ ದೆವಸ್ಯ, ಪ್ರಧಾನ ಕಾರ್ಯದರ್ಶಿಗಳಾದ  ಗಣೇಶ್ ಗೌಡ, ಜೊತೆ ಕಾರ್ಯದರ್ಶಿಗಳಾದ ಶ್ರೀನಾಥ್ ಕೆ.ಎಂ., ವಾಣಿ ಶಿಕ್ಷಣ ಸಂಸ್ಥೆಗಳ ನಿರ್ದೇಶಕರುಗಳು ಮತ್ತು ಕಾಲೇಜಿನ ಪ್ರಾಂಶುಪಾಲರಾದ  ವಿಷ್ಣು ಪ್ರಕಾಶ್ ಎಂ. ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರದ ಲಕ್ಷ್ಮೀನಾರಾಯಣ ಕೆ ಹಾಗೂ ಆಡಳಿತಾಧಿಕಾರಿಗಳಾದ ಪ್ರಸಾದ್ ಕುಮಾರ್ ಉಪಸ್ಥಿತರಿದ್ದರು.

ಹಣ್ಣಿನ ಗಿಡಗಳನ್ನು ನೆಡುವ ಮೂಲಕ ಪರಿಸರ ಸಂರಕ್ಷಣೆಯ ಕಾರ್ಯದಲ್ಲಿ ವಾಣಿ ಶಿಕ್ಷಣ ಸಂಸ್ಥೆ ಕೈಜೋಡಿಸಿದ್ದು, ವಿದ್ಯಾರ್ಥಿಗಳಲ್ಲಿ ಪರಿಸರದ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಈ ಸಂದರ್ಭದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮ ಅಧಿಕಾರಿ ದಿನೇಶ್ ಗೌಡ ಯು., ಸಹ ಕಾರ್ಯಕ್ರಮ ಅಧಿಕಾರಿ ಶ್ರಾವ್ಯ ಎಸ್., ರೋವರ್ಸ್ ಮತ್ತು ರೇಂಜರ್ಸ್ ಘಟಕದ RSL ಬೆಳಿಯಪ್ಪ ಕೆ. ಹಾಗೂ RL ರಕ್ಷಾ, ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂಸೇವಕರು, ರೋವರ್ಸ್ ಮತ್ತು ರೇಂಜರ್ಸ್ ವಿದ್ಯಾರ್ಥಿಗಳು ಹಾಗೂ ಇತರ ವಿದ್ಯಾರ್ಥಿಗಳು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

“ಒಂದು ಗಿಡ – ಒಂದು ಜೀವ” ಎಂಬ ಸಂದೇಶದೊಂದಿಗೆ ನಡೆದ ಈ ಕಾರ್ಯಕ್ರಮವು ಪರಿಸರ ಸಂರಕ್ಷಣೆಯ ಮಹತ್ವವನ್ನು ವಿದ್ಯಾರ್ಥಿಗಳಿಗೆ ಮನದಟ್ಟು ಮಾಡುವಲ್ಲಿ ಯಶಸ್ವಿಯಾಯಿತು.

Advertisement