Home News Puttur: ಪುತ್ತೂರು ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರ ನೇಮಕ ರದ್ದು ಕೋರಿ ಹೈಕೋರ್ಟ್ ನಲ್ಲಿ ರಾಜೇಶ್...

Puttur: ಪುತ್ತೂರು ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರ ನೇಮಕ ರದ್ದು ಕೋರಿ ಹೈಕೋರ್ಟ್ ನಲ್ಲಿ ರಾಜೇಶ್ ಬನ್ನೂರವರಿಂದ ರಿಟ್ ಅರ್ಜಿ !

Hindu neighbor gifts plot of land

Hindu neighbour gifts land to Muslim journalist

Puttur: ಪುತ್ತೂರು ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ಅಮಳ ರಾಮಚಂದ್ರ ಅವರನ್ನು ಸರಕಾರ ನೇಮಿಸಿದ್ದು, ಈ ನೇಮಕಾತಿಯನ್ನು ರದ್ದುಪಡಿಸಬೇಕೆಂದು ಕೋರಿ ಪುತ್ತೂರಿನ ಮಾಜಿ ಪುರಸಭಾಧ್ಯಕ್ಷ ರಾಜೇಶ್ ಬನ್ನೂರು ಅವರು ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದಾರೆ.

ಈ ನೇಮಕಾತಿಯು ನಿಯಮಗಳಿಗೆ ವಿರುದ್ಧವಾಗಿದೆ ಎಂದು ಅರ್ಜಿಯಲ್ಲಿ ದೂರಲಾಗಿದೆ. ಪ್ರಾಧಿಕಾರದ ನಿಯಮಗಳ ಪ್ರಕಾರ, ಅಧ್ಯಕ್ಷ ಸ್ಥಾನವನ್ನು ಅಲಂಕರಿಸುವವರು ಸ್ಥಳೀಯ ಯೋಜನಾ ಪ್ರದೇಶದ ನಿವಾಸಿಯಾಗಿರಬೇಕು ಮತ್ತು ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ ವಾಸಿಸುತ್ತಿರಬೇಕು. ಆದರೆ, ಅಮಳ ರಾಮಚಂದ್ರ ಅವರು ಮೂಲತಃ ಪುತ್ತೂರು ತಾಲೂಕಿನ ಕೊಳ್ತಿಗೆ ಗ್ರಾಮದ ಅಮಳ ನಿವಾಸಿಯಾಗಿದ್ದು, ಅಲ್ಲಿನ ಮತದಾರರಾಗಿದ್ದಾರೆ. ಅಲ್ಲದೆ, ಅವರು ಕೊಳ್ತಿಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸದಸ್ಯರೂ ಆಗಿದ್ದಾರೆ.