ಸೋಮವಾರ, 26 ಅಕ್ಟೋಬರ್ 2026
Trending

ಕೈತಪ್ಪಿದ ಸಚಿವ ಸ್ಥಾನ – ಶಾಸಕ ಸ್ಥಾನಕ್ಕೆ ಯಶವಂತರಾಯ ಗೌಡ ರಾಜೀನಾಮೆ!

ಇಂದು ಸಂಜೆ 4 ಗಂಟೆಗೆ ರಾಜಭವನದಲ್ಲಿ ನೂತನ ಸಚಿವರ ಪ್ರಮಾಣವಚನ ಸ್ವೀಕಾರ ಸಮಾರಂಭ ನಿಗದಿಯಾಗಿದ್ದು, ಹಲವು ಹಿರಿಯ ಹಾಗೂ ಪ್ರಭಾವಿ ನಾಯಕರಿಗೆ ಸಚಿವ ಸ್ಥಾನ ಕೈತಪ್ಪಿರುವುದು ಅವರ ಬೆಂಬಲಿಗರು ಮತ್ತು ಅಭಿಮಾನಿಗಳ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ವಿಜಯಪುರ ಜಿಲ್ಲೆಯ ಇಂಡಿ ಕ್ಷೇತ್ರದ ಶಾಸಕ ಯಶವಂತರಾಯ ಗೌಡ ಪಾಟೀಲ್ ಅವರು ಸಚಿವ ಸ್ಥಾನ ಸಿಗದಿದ್ದಕ್ಕೆ ತೀವ್ರ ಅಸಮಾಧಾನಗೊಂಡು ತಮ್ಮ ಶಾಸಕ ಸ್ಥಾನಕ್ಕೇ ರಾಜೀನಾಮೆ ನೀಡಿದ್ದಾರೆ. 

Sponsored

ಹಿರಿಯ ನಾಯಕರಾಗಿದ್ದರೂ ತಮ್ಮನ್ನು ಸಂಪುಟದಿಂದ ಹೊರಗಿಟ್ಟಿರುವುದು ಅವರಿಗೆ ತೀವ್ರ ನಿರಾಶೆ ಮೂಡಿಸಿದ್ದು, ಈ ನಿರ್ಧಾರಕ್ಕೆ ಪ್ರತಿರೋಧವಾಗಿ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಕೆ ಮಾಡಿದ್ದಾರೆ ಎನ್ನಲಾಗಿದೆ. ಈ ಬೆಳವಣಿಗೆಗಳು ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದ್ದು, ಹೈಕಮಾಂಡ್‌ಗೆ ದೊಡ್ಡ ತಲೆನೋವಾಗಿ ಪರಿಣಮಿಸಿವೆ.

ಸಚಿವ ಸ್ಥಾನ ಸಿಗದಿದ್ದಕ್ಕೆ ಮೈಸೂರಿನಲ್ಲಿ ಶಾಸಕ ತನ್ವೀರ್ ಸೇಠ್ ಅವರ ಅಭಿಮಾನಿಗಳು ಬೀದಿಗಿಳಿದು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿದ್ದು, ಮೆರವಣಿಗೆಯ ನಡುವೆಯೇ ಆಕ್ರೋಶಗೊಂಡ ಅವರ ಬೆಂಬಲಿಗನೊಬ್ಬ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಆಘಾತಕಾರಿ ಘಟನೆ ನಡೆದಿದೆ. ತಕ್ಷಣವೇ ಆತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.