Home News Yettinahole Project: ಎತ್ತಿನಹೊಳೆ ಯೋಜನೆಗೆ ಹಿನ್ನೆಡೆ: 423 ಎಕ್ರೆ ಅರಣ್ಯ ಭೂಮಿ ಬಳಕೆಗೆ ಅನುಮೋದನೆ ನಿರಾಕರಿಸಿದ...

Yettinahole Project: ಎತ್ತಿನಹೊಳೆ ಯೋಜನೆಗೆ ಹಿನ್ನೆಡೆ: 423 ಎಕ್ರೆ ಅರಣ್ಯ ಭೂಮಿ ಬಳಕೆಗೆ ಅನುಮೋದನೆ ನಿರಾಕರಿಸಿದ ಕೇಂದ್ರ

Hindu neighbor gifts plot of land

Hindu neighbour gifts land to Muslim journalist

Yettinahole Project: ಹಾಸನ ಜಿಲ್ಲೆಯ ಸಕಲೇಶಪುರ ಪರಿಸರದಿಂದ ಬಯಲು ಸೀಮೆಯ ಜಿಲ್ಲೆಗಳಿಗೆ ನೀರು ಹರಿಸುವ ಎತ್ತಿನಹೊಳೆ ಯೋಜನೆಗೆ ಕೇಂದ್ರ ಸರಕಾರ ಅನುಮೋದನೆ ನಿರಾಕರಿಸಿದೆ. ಅಗತ್ಯವಿದ್ದ ಹೆಚ್ಚುವರಿ 423 ಎಕರೆ ಅರಣ್ಯ ಭೂಮಿ ಬಳಕೆಗೆ ಕೇಂದ್ರ ಪರಿಸರ ಸಚಿವಾಲಯ ನಿರಾಕರಣೆ ಮಾಡಿದೆ.

ಹಾಗಾಗಿ ಈ ಯೋಜನೆ ವಿಳಂಬವಾಗುವ ಸಾಧ್ಯತೆ ಇದೆ. ಹಾಸನ ಮತ್ತು ತುಮಕೂರು ಜಿಲ್ಲೆಗಳ ವ್ಯಾಪ್ತಿಯ 432 ಎಕರೆ ಅರಣ್ಯ ಭೂಮಿಯನ್ನು ‘ಗುರುತ್ವಾಕರ್ಷಣೆ ಕಾಲುವೆ’ ನಿ ರ್ಮಾಣಕ್ಕೆ ಬಳಸುವ ನಿಟ್ಟಿನಲ್ಲಿ ಈ ವರ್ಷದ ಮಾರ್ಚ್‌ನಲ್ಲಿ ಕೇಂದ್ರಕ್ಕೆ ಕರ್ನಾಟಕ ಸರ್ಕಾರ ಪ್ರಸ್ತಾವನೆ ಸಲ್ಲಿಸಿತ್ತು. ಸಚಿವಾಲಯದ ಡಿಐಜಿಎಫ್‌ ಪ್ರಣಿತಾ ಪೌಲ್‌ ನೇತೃತ್ವದ ತಂಡವು ಪರಿಶೀಲನೆ ಮಾಡಿತ್ತು. ನಂತರ ವರದಿ ಸಲ್ಲಿಕೆ ಮಾಡಿತ್ತು.

33 ಷರತ್ತುಗಳನ್ನು ವಿಧಿಸಿ 2016 ರಲ್ಲಿ ಅನುಮೋದನೆ ಕೊಡಲಾಗಿತ್ತು. ಆದರೆ ಬಹುತೇಕ ಷರತ್ತುಗಳನ್ನು ಪಾಲನೆ ಮಾಡಿಲ್ಲ. ಭೂಕುಸಿತ, ಮಣ್ಣಿನ ಕೊರತೆ ಉಂಟಾಗಿದೆ ಎಂದ ಎನ್‌ಜಿಟಿಯ ಮೇಲ್ವಿಚಾರಣಾ ತಂಡ 2019 ರಲ್ಲಿ ವರದಿ ಸಲ್ಲಿಕೆ ಮಾಡಿತ್ತು.