Home News Udupi : ಯುವ ಕ್ರಿಕೆಟಿಗ ನೇಣು ಬಿಗಿದುಕೊಂಡು ಆತ್ಮಹತ್ಯೆ!!

Udupi : ಯುವ ಕ್ರಿಕೆಟಿಗ ನೇಣು ಬಿಗಿದುಕೊಂಡು ಆತ್ಮಹತ್ಯೆ!!

Hindu neighbor gifts plot of land

Hindu neighbour gifts land to Muslim journalist

Udupi ಜಿಲ್ಲೆಯ ಕಾಪುವಿನಲ್ಲಿ ಯುವ ಕ್ರಿಕೆಟಿಗನೊಬ್ಬ ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಮೃತ ಯುವಕನನ್ನು ಬೊಳ್ಜೆಯ ಆದಿತ್ಯ(24) ಎಂದು ಗುರುತಿಸಲಾಗಿದೆ. ಈತ ಕಳೆದ ವರ್ಷ ಅಪಘಾತದಲ್ಲಿ ಮೃತಪಟ್ಟ ತನ್ನ ಸ್ನೇಹಿತ ಸುಕ್ಷಿತ್ ಹೆಸರಿನಲ್ಲಿ ಕ್ರಿಕೆಟ್ ತಂಡವನ್ನು ಕಟ್ಟಿದ್ದರು. ಕಳೆದ ವರ್ಷ ಅಪಘಾತದಲ್ಲಿ ಮೃತಪಟ್ಟ ತನ್ನ ಸ್ನೇಹಿತ ಸುಕ್ಷಿತ್‌ನ ಹೆಸರಿನಲ್ಲಿ ಕ್ರಿಕೆಟ್‌ ತಂಡವನ್ನು ಕಟ್ಟಿಕೊಂಡಿದ್ದ ಆದಿತ್ಯ ಶನಿವಾರ ರಾತ್ರಿ ಪೆರಂಪಳ್ಳಿಯಲ್ಲಿ ನಡೆದ ಕ್ರಿಕೆಟ್‌ ಪಂದ್ಯಾಟದಲ್ಲಿ ತನ್ನ ತಂಡದೊಂದಿಗೆ ಭಾಗವಹಿಸಿದ್ದ.

ಆದರೆ ರವಿವಾರ ಮುಂಜಾನೆ 3 ಗಂಟೆಗೆ ಮನೆಗೆ ಬಂದ ಬಳಿಕ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದ. ಬೆಳಗ್ಗೆ 7.30ಕ್ಕೆ ಅಜ್ಜಿ ಬಾಗಿಲು ಬಡಿದಾಗ, ಬಾಗಿಲು ತೆರೆಯದೇ ಇದ್ದು ಕಿಟಕಿಯಿಂದ ಇಣುಕಿ ನೋಡಿದಾಗ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

ಆತನ ತಂದೆ, ತಾಯಿ ತೀರಿ ಹೋಗಿದ್ದು, ಅಜ್ಜಿ ಮತ್ತು ಸಹೋದರನ ಆಶ್ರಯದಲ್ಲಿ ಬೆಳೆಯುತ್ತಿದ್ದ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಆತನ ಸಹೋದರ ಸಚಿನ್‌ ಅವರು ನೀಡಿರುವ ದೂರಿನಂತೆ ಕಾಪು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.