ಆಂಧ್ರಪ್ರದೇಶದ ಜನಸೇನಾ ಪಕ್ಷದ ರಾಜ್ಯಸಭಾ ಸಂಸದ ಲಿಂಗಮನೇನಿ ರಮೇಶ್ ಅವರ ಪುತ್ರ ಸಂಜುಶ್ ಚಲಾಯಿಸುತ್ತಿದ್ದ ಅತಿವೇಗದ ಕಾರು (ಆಸ್ಟನ್ ಮಾರ್ಟಿನ್) ಡಿಕ್ಕಿ ಹೊಡೆದ ಪರಿಣಾಮ ಹೈದರಾಬಾದ್‌ನಲ್ಲಿ 26 ವರ್ಷದ ಯುವತಿ ಮೃತಪಟ್ಟಿದ್ದಾರೆ.
Sponsoredಇನಾರ್ಬಿಟ್ ಮಾಲ್‌ನ ಲೈಫ್‌ಸ್ಟೈಲ್ ಸ್ಟೋರ್‌ನಲ್ಲಿ ಕೆಲಸ ಮಾಡುತ್ತಿದ್ದ ಭಾರತೀ ಮುಖಿ (26) ಎಂಬುವವಳು ಸಾವನ್ನಪ್ಪಿದ ಯುವತಿ.
ಮಧ್ಯಾಹ್ನ ಭಾರತೀ ಮುಖಿ ಅವರು ರಸ್ತೆ ದಾಟುತ್ತಿದ್ದಾಗ ಅತಿವೇಗ ಹಾಗೂ ನಿರ್ಲಕ್ಷ್ಯದಿಂದ ಬಂದ ಆಸ್ಟನ್ ಮಾರ್ಟಿನ್ ಕಾರು ಭಾರತೀ ಅವರಿಗೆ ಡಿಕ್ಕಿ ಹೊಡೆಯಿತು. ತೀವ್ರವಾಗಿ ಗಾಯಗೊಂಡ ಅವರನ್ನು ಅದೇ ಕಾರಿನಲ್ಲಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಅವರು ಈಗಾಗಲೇ ಮೃತಪಟ್ಟಿದ್ದಾರೆ.
ಮಾದಾಪುರ ಪೊಲೀಸರು ವಾಹನ ಚಾಲಕ ಲಿಂಗಮನೇನಿ ಸಂಜುಶ್ ವಿರುದ್ಧ ಬಿಎನ್ಎಸ್ (BNS) ಸೆಕ್ಷನ್ 106(1) ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. ಪೊಲೀಸರು ಕಾರನ್ನು ವಶಕ್ಕೆ ಪಡೆದಿದ್ದು, ರಕ್ತದ ಮಾದರಿಗಳನ್ನು ಸಂಗ್ರಹಿಸಿ ತನಿಖೆ ಮುಂದುವರಿಸಿದ್ದಾರೆ.




