Home latest ಜ.12 ರಿಂದ ಜ.18ರವರೆಗೆ ಯುವ ಸಪ್ತಾಹ – ದ.ಕ.ಜಿಲ್ಲೆಯಾದ್ಯಂತ ವಿವೇಕ ರಥ ಯುವ ಪಥ-ಯುವ ಜಾಗೃತಿ...

ಜ.12 ರಿಂದ ಜ.18ರವರೆಗೆ ಯುವ ಸಪ್ತಾಹ – ದ.ಕ.ಜಿಲ್ಲೆಯಾದ್ಯಂತ ವಿವೇಕ ರಥ ಯುವ ಪಥ-ಯುವ ಜಾಗೃತಿ ಜಾಥಾ

Hindu neighbor gifts plot of land

Hindu neighbour gifts land to Muslim journalist

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾಡಳಿತ ,ದ.ಕ.ಜಿ.ಪಂ., ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ದ.ಕ., ದ.ಕ.ಜಿಲ್ಲಾ ಯುವಜನ ಒಕ್ಕೂಟ ಇದರ ವತಿಯಿಂದ ಸ್ವಾಮಿ ವಿವೇಕಾನಂದರ ಜನ್ಮದಿನಾಚರಣೆಯ ಪ್ರಯುಕ್ತ ಜಿಲ್ಲೆಯಾದ್ಯಂತ ಜ.12 ರಿಂದ ಜ.18ರವರೆಗೆ ಯುವ ಸಪ್ತಾಹ ವಿವೇಕ ರಥ ಯುವ ಪಥ-ಯುವ ಜಾಗೃತಿ ಜಾಥ ನಡೆಯಲಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರವಿ ವೈ ನಾಯಕ್ ,ಜಿಲ್ಲಾ ಯುವಜನ ಒಕ್ಕೂಟದ ಅಧ್ಯಕ್ಷ ಸುರೇಶ್ ರೈ ಸೂಡಿಮುಳ್ಳು ಹಾಗೂ ವಿವಿಧ ತಾಲೂಕು ಘಟಕಗಳ ಪದಾಧಿಕಾರಿಗಳು ತಿಳಿಸಿದ್ದಾರೆ.

ಜ.12ರಂದು ಬೆಳಿಗ್ಗೆ 10.30ಕ್ಕೆ ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಉದ್ಘಾಟಿಸುವರು.ಮೀನುಗಾರಿಕೆ ಹಾಗೂ ಬಂದರು ಒಳನಾಡು ಸಾರಿಗೆ ಸಚಿವ ಎಸ್.ಅಂಗಾರ ಸನ್ಮಾನಿಸಲಿದ್ದಾರೆ.

ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಪುಷ್ಪಾರ್ಚನೆ ಮಾಡುವರು.ಅಧ್ಯಕ್ಷತೆಯನ್ನು ಶಾಸಕ ವೇದವ್ಯಾಸ ಕಾಮತ್ ವಹಿಸುವರು.ರಥದ ಉದ್ಘಾಟನೆಯನ್ನು ಸಂಸದ ನಳಿನ್ ಕುಮಾರ್ ಕಟೀಲ್ ನೆರವೇರಿಸುವರು.ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಜಯಾನಂದ ಅಂಚನ್ ,ರಾಜ್ಯ ಸಭಾ ಸದಸ್ಯ ಡಾ.ಡಿ.ವೀರೇಂದ್ರ ಹೆಗ್ಗಡೆ ಹಾಗೂ ಜಿಲ್ಲೆಯ ಶಾಸಕರು,ನಿಗಮ ಮಂಡಳಿಗಳ ಅಧ್ಯಕ್ಷರು ಪಾಲ್ಗೊಳ್ಳುವರು. ಗೌರವ ಉಪಸ್ಥಿತಿಯಲ್ಲಿ ಜಿಲ್ಲಾಧಿಕಾರಿ ಎಂ.ಆರ್.ರವಿ ಕುಮಾರ್,ಪೊಲೀಸ್ ಆಯುಕ್ತ ಎನ್.ಶಶಿ ಕುಮಾರ್,ಜಿ.ಪಂ.ಸಿಇಓ ಡಾ.ಕುಮಾರ್,ದ.ಕ.ಎಸ್ಪಿ ರಿಷಿಕೇಶ್ ಭಗವಾನ್ ಸೋನಾವಣೆ, ಮನಪಾ ಆಯುಕ್ತ ಅಕ್ಷಯ್ ಶ್ರೀಧರ್ ,ಜಿಲ್ಲಾ ಯುವಜನ ಒಕ್ಕೂಟದ ಗೌರವಾಧ್ಯಕ್ಷ ರಾಜೀವ ಸಾಲ್ಯಾನ್,ಕಾರ್ಯದರ್ಶಿ ಗಿರೀಶ್ ಶೆಟ್ಟಿ ಪಾಲ್ಗೊಳ್ಳುವರು.

ವಿವೇಕ ರಥ ಯುವ ಪಥ-ಯುವ ಜಾಗೃತಿ ಜಾಥಾವು ಜ.12ರಂದು ಮಧ್ಯಾಹ್ನ ಅಪರಾಹ್ನ 2.30ಕ್ಕೆ ಮೂಡಬಿದಿರೆ ಸಮಾಜಮಂದಿರಕ್ಕೆ ,ಜ.13ರಂದು ಬೆಳಿಗ್ಗೆ 9ಕ್ಕೆ ಬೆಳ್ತಂಗಡಿ ಮಿನಿವಿಧಾನ ಸೌದಕ್ಕೆ ,ಮದ್ಯಾಹ್ನ 2.30ಕ್ಕೆ ಕಲ್ಲಡ್ಕ ಶ್ರೀರಾಮ ಪ್ರಥಮ ದರ್ಜೆ ಮಹಾವಿದ್ಯಾಲಯಕ್ಕೆ ,ಜ.14ರಂದು ಬೆಳಿಗ್ಗೆ 10ಕ್ಕೆ ಪುತ್ತೂರು ನೆಹರುನಗರದ ವಿವೇಕಾನಂದ ಕಾಲೇಜಿಗೆ ,ಜ.15ರಂದು ಬೆಳಿಗ್ಗೆ 10ಕ್ಕೆ ಕಡಬ ದುರ್ಗಾಂಬಾ ದೇವಸ್ಥಾನಕ್ಕೆ ,ಜ.16ರಂದು ಸವಣೂರು ಯುವಕ ಮಂಡಲಕ್ಕೆ ,ಜ.17ರಂದು ಬೆಳಿಗ್ಗೆ 10ಕ್ಕೆ ಸುಳ್ಯ ಯುವಜನ ಸಂಯುಕ್ತ ಮಂಡಳಿ ಆವರಣಕ್ಕೆ ಆಗಮಿಸಲಿದೆ.

ಜ.18ರಂದು ಬೆಳಿಗ್ಗೆ 10ಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಲಿದ್ದು ,ಸುಬ್ರಹ್ಮಣ್ಯದ ವಲ್ಲೀಶ ಸಭಾಭವನದಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ.