ಶನಿವಾರ, 24 ಅಕ್ಟೋಬರ್ 2026

ಎರಡು ಬಸ್‌ಗಳಿಗೆ ಒಂದೇ ನಂಬರ್ ಆರೋಪ: ಜಮೀರ್ ಅಹ್ಮದ್ ವಿರುದ್ಧದ ಅರ್ಜಿ ವಜಾ

Zameer Ahmed

ಬೆಂಗಳೂರು: ಒಂದೇ ನೋಂದಣಿ ಸಂಖ್ಯೆಯಲ್ಲಿ ಎರಡು ಬಸ್‌ಗಳು ಸಂಚರಿಸುತ್ತಿದ್ದವು ಎಂಬ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೆ ಹೈಕೋರ್ಟ್‌ನಲ್ಲಿ ನಿರಾಳತೆ ಸಿಕ್ಕಿದೆ.

ಪ್ರಕರಣದಿಂದ ಅವರನ್ನು ಕೈಬಿಟ್ಟಿದ್ದ ಕೆಳ ನ್ಯಾಯಾಲಯದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠ ಸರ್ಕಾರದ ಮೇಲ್ಮನವಿಯನ್ನು ವಿಚಾರಣೆ ನಡೆಸಿ ಈ ಆದೇಶ ನೀಡಿದೆ.

ಸಚಿವ ಬಿ. ನಾಗೇಂದ್ರಗೆ ಮತ್ತೊಂದು ರಿಲೀಫ್; ರಾಜ್ಯದ ಹೊರಗೆ ಪ್ರಯಾಣಕ್ಕೆ ಗ್ರೀನ್ ಸಿಗ್ನಲ್

2002ರಲ್ಲಿ ನ್ಯಾಷನಲ್ ಟ್ರಾವೆಲ್ಸ್‌ಗೆ ಸೇರಿದ ಬಸ್‌ಗಳ ವಿಚಾರವಾಗಿ ಪ್ರಕರಣ ದಾಖಲಾಗಿತ್ತು. KA-01-B-5454 ನೋಂದಣಿ ಸಂಖ್ಯೆಯಲ್ಲಿ ಎರಡು ಬಸ್‌ಗಳು ಸಂಚರಿಸುತ್ತಿದ್ದು, ಇದರಿಂದ ತೆರಿಗೆ ನಷ್ಟ ಉಂಟಾಗುತ್ತಿದೆ ಎಂದು ಆರೋಪಿಸಲಾಗಿತ್ತು. ಈ ಪ್ರಕರಣದಲ್ಲಿ ಫಿರೋಜ್ ಅಹ್ಮದ್ ಹಾಗೂ ಜಮೀರ್ ಅಹ್ಮದ್ ವಿರುದ್ಧ ಆರೋಪಪಟ್ಟಿ ಸಲ್ಲಿಸಲಾಗಿತ್ತು.
ಆದರೆ, ಸಂಬಂಧಿತ ಬಸ್ ಅನ್ನು ತಾವು ಮಾರಾಟ ಮಾಡಿರುವುದಾಗಿ ಜಮೀರ್ ಅಹ್ಮದ್ ನ್ಯಾಯಾಲಯಕ್ಕೆ ದಾಖಲೆಗಳನ್ನು ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ 2016ರಲ್ಲಿ ಸೆಷನ್ಸ್ ಕೋರ್ಟ್ ಅವರನ್ನು ಪ್ರಕರಣದಿಂದ ಕೈಬಿಟ್ಟಿತ್ತು.

ಸಚಿವ ಬಿ. ನಾಗೇಂದ್ರಗೆ ಮತ್ತೊಂದು ರಿಲೀಫ್; ರಾಜ್ಯದ ಹೊರಗೆ ಪ್ರಯಾಣಕ್ಕೆ ಗ್ರೀನ್ ಸಿಗ್ನಲ್

ಸೆಷನ್ಸ್ ಕೋರ್ಟ್ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿತ್ತು. ಇದೀಗ ಹೈಕೋರ್ಟ್ ಸರ್ಕಾರದ ಅರ್ಜಿಯನ್ನು ವಜಾಗೊಳಿಸಿರುವುದರಿಂದ ಜಮೀರ್ ಅಹ್ಮದ್ ಅವರಿಗೆ ಈ ಪ್ರಕರಣದಲ್ಲಿ ರಿಲೀಫ್ ದೊರೆತಿದೆ.