Home Karnataka State Politics Updates Congress MLA passed away: ರಾಜ್ಯದ ಪ್ರಬಲ ಕಾಂಗ್ರೆಸ್ ಶಾಸಕ ಹೃದಯಾಘಾತದಿಂದ ನಿಧನ

Congress MLA passed away: ರಾಜ್ಯದ ಪ್ರಬಲ ಕಾಂಗ್ರೆಸ್ ಶಾಸಕ ಹೃದಯಾಘಾತದಿಂದ ನಿಧನ

Hindu neighbor gifts plot of land

Hindu neighbour gifts land to Muslim journalist

 

Congress MLA passed away: ಯಾದಗಿರಿ ಜಿಲ್ಲೆಯ ಸುರಪುರ ಕ್ಷೇತ್ರದ ಶಾಸಕ, ಕಾಂಗ್ರೆಸ್ ನಾಯಕ ರಾಜಾ ವೆಂಕಟಪ್ಪ ನಾಯಕ ಅವರು ರವಿವಾರ ಇಂದು ಫೆ.25 ಭಾನುವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ(Congress MLA passed away)

ಹೌದು, 67 ವರ್ಷದ ರಾಜಾ ವೆಂಕಟಪ್ಪ ನಾಯಕ(Venkappa nayaka) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಭಾನುವಾರ ಸಾವನ್ನಪ್ಪಿದ್ದಾರೆ. ಅನಾರೋಗ್ಯದ ಕಾರಣ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ನಿಧನ ಹೊಂದಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅವರು 1,13,559 ಮತಗಳನ್ನು ಪಡೆದು ಜಯಗಳಿಸಿದ್ದರು.

ಅಂದಹಾಗೆ ನಾಲ್ಕು ಬಾರಿ ಶಾಸಕರಾಗಿದ್ದ ರಾಜಾ ವೆಂಕಟಪ್ಪ ನಾಯಕ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಆಪ್ತರಾಗಿದ್ದರು. ಕಾಂಗ್ರೆಸ್​ನಿಂದಲೇ ರಾಜಕೀಯ ಜೀವನ ಆರಂಭಿಸಿದ್ದ ರಾಜಾ ವೆಂಕಟಪ್ಪ ನಾಯಕ ಇತ್ತೀಚಿಗೆ ಉಗ್ರಾಣ ನಿಗಮದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದರು