Home Karnataka State Politics Updates HDK: ನಟಿ ರನ್ಯಾ ರಾವ್ ಕೇಸ್ – ಪರಮೇಶ್ವರ್ ಅವರನ್ನು ಸಿಕ್ಕಿಹಾಕಿಸಿದ್ದೇ ‘ಕೈ’ ಪ್ರಭಾವಿ ನಾಯಕ,...

HDK: ನಟಿ ರನ್ಯಾ ರಾವ್ ಕೇಸ್ – ಪರಮೇಶ್ವರ್ ಅವರನ್ನು ಸಿಕ್ಕಿಹಾಕಿಸಿದ್ದೇ ‘ಕೈ’ ಪ್ರಭಾವಿ ನಾಯಕ, ಇದು ಸಿದ್ದರಾಮಯ್ಯಗೂ ಗೊತ್ತು!! ಕುಮಾರಸ್ವಾಮಿ ಹೊಸ ಬಾಂಬ್

Hindu neighbor gifts plot of land

Hindu neighbour gifts land to Muslim journalist

 

HDK: ನಟಿ ರನ್ಯಾ ರಾವ್ ಕೇಸ್ ಗೂ, ಗೃಹ ಸಚಿವ ಪರಮೇಶ್ವರ್ ಅವರಿಗೂ ಸಂಬಂಧ ಇದೆ ಎಂಬ ಸುದ್ದಿ ರಾಜ್ಯಾದ್ಯಂತ ಸದ್ದು ಮಾಡುತ್ತಿದೆ. ಇದರ ನಡುವೆಯೇ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರು ಹೊಸ ಬಾಂಸಡಿಸಿದ್ದಾರೆ.

 

 ಹೌದು ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಹಿಂದೂ ಮರುನಾಮಕರಣ ಮಾಡುವ ವಿಚಾರವಾಗಿ ಸಿಟ್ಟಾಗಿರುವ ಕುಮಾರಸ್ವಾಮಿಯವರು ಡಿಕೆ ಶಿವಕುಮಾರ್ ಅವರ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸುತ್ತಿದ್ದಾರೆ. ಈ ಕುರಿತಾಗಿ ಮಾತನಾಡಿದ ಅವರು ‘ಮುಖ್ಯಮಂತ್ರಿ ಸಿದ್ದಾರಾಮಯ್ಯ ತಾವು ಅಹಿಂದ ಎನ್ನುತ್ತಾರೆ. ದಲಿತರ ಭೂಮಿ ಕಬಳಿಸಿದವರನ್ನೇ ಜೊತೆಯಲ್ಲಿ ಇಟ್ಟುಕೊಂಡಿದ್ದಾರೆ. ಈಗೇನೋ ಅವರನ್ನೇ ಮುಖ್ಯಮಂತ್ರಿ ಮಾಡಬೇಕು ಅಂತಿದ್ದಾರೆ ಎಂದು ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ. ಹಿಂದುಳಿದ ವರ್ಗಗದವರನ್ನು ಗುರಿಯಾಗಿಸಿ ಪರಮೇಶ್ವರ್‌ ಶಿಕ್ಷಣ ಸಂಸ್ಥೆಗಳ ಮೇಲೆ ಇಡಿ ದಾಳಿ ನಡೆಸಿದೆ ಎಂಬ ಕಾಂಗ್ರೆಸ್ ನಾಯಕ ಹರಿಪ್ರಸಾದ್ ಹೇಳಿಕೆಗೆ ತಿರುಗೇಟು ನೀಡಿದ ಕುಮಾರಸ್ವಾಮಿ, ಸಚಿವ ಪರಮೇಶ್ವರ ಸಂಕಷ್ಟಕ್ಕೆ ಒಳಗಾಗಲು ಕಾಂಗ್ರೆಸ್​​ನ ಪ್ರಭಾವಿ ನಾಯಕನೇ ಕಾರಣ‌’ ಎನ್ನುವ ಮೂಲಕ ದಳಪತಿ ಹೊಸ ಬಾಂಬ್‌ ಸಿಡಿಸಿದ್ದಾರೆ.

 

ಅಲ್ಲದೆ ಇನ್ನೂ ನಟಿ ರನ್ಯಾರಾವ್‌ ಚಿನ್ನ ತರುವ ಮಾಹಿತಿ ಕೊಟ್ಟಿದ್ದೇ ಕಾಂಗ್ರೆಸ್ ಪ್ರಭಾವಿ ನಾಯಕ, ಪರಮೇಶ್ವರ್ ದಲಿತರ ಸಮಾವೇಶ ಮಾಡಲು ಹೊರಟರು. ತಾವೇ ಮುಂದಿನ ಸಿಎಂ ಆಗುತ್ತೇನೆ ಎಂದು ಸಮಾವೇಶಕ್ಕೆ ಮುಂದಾದರು. ಅದಕ್ಕೆ ಪ್ರತಿಯಾಗಿ ಕಾಂಗ್ರೆಸ್ ಪ್ರಭಾವಿ ನಾಯಕನೇ ಅವರನ್ನು ಸಿಲುಕಿಸಿದ್ದಾರೆ. ಇದೆಲ್ಲಾ ಸಿಎಂ ಸಿದ್ದರಾಮಯ್ಯಗೆ ಗೊತ್ತಿಲ್ಲವೇ? ಮುಂದೆ ಸಿಎಂ ಆಗಲು ಟವಲ್ ಹಾಸಿಕೊಂಡು ಇರುವವರೇ ಸಂದೇಶ ನೀಡಿದ್ದಾರೆ. ಈ ಪ್ರಕರಣ ಹೊರಬರಲು ಸಂದೇಶ ನೀಡಿದ್ದೇ ಆ ಪ್ರಭಾವಿ ನಾಯಕ. ಸಿಎಂ ಹತ್ತಿರ ಗುಪ್ತಚರ ಇಲ್ಲವೇ ಎಂದು ಕುಮಾರಸ್ವಾಮಿ ಕೆಂಡವಾಗಿದ್ದಾರೆ.

 

ಇದೆಲ್ಲಾ ಗೊತ್ತಿದ್ದರು ಕೇಂದ್ರದ ಮೇಲೆ ಆರೋಪ ಮಾಡುತ್ತಿದ್ದಾರೆ. ಕಾಂಗ್ರೆಸ್ ಪ್ರಭಾವಿ ನಾಯಕನಿಂದ ಇದೆಲ್ಲಾ ಆಗಿದೆ. ಅದೆನೋ ಎಷ್ಟು ಸಮಿತಿ ಮಾಡುತ್ತಿದ್ದೀರಲ್ಲವೇ, ಅದೆಲ್ಲಾ ಏನಾಯ್ತು. ಮಾತು ಎತ್ತಿದರೆ ನುಡಿದಂತೆ ನಡೆದಿದ್ದೇವೆ ಎನ್ನುತ್ತಾರೆ. ನುಡಿದಂತೆ ನಡೆಯಲು ಎಷ್ಟು ಟ್ಯಾಕ್ಸ್ ಹಾಕಿದ್ದಾರೆ ಎಂದು ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.