Home Karnataka State Politics Updates ರಾಜ್ಯಕ್ಕೆ ಎಂಟ್ರಿಯಾಗಲಿದ್ದಾರೆ ಬಿಜೆಪಿ ಚಾಣಾಕ್ಷ್ಯ ಅಮಿತ್ ಶಾ!! ಬಿಜೆಪಿ ನಾಯಕರಲ್ಲಿ ನಡುಕ-ಶಾ ಭೇಟಿಯ ಹಿಂದಿದೆ ಬಲವಾದ...

ರಾಜ್ಯಕ್ಕೆ ಎಂಟ್ರಿಯಾಗಲಿದ್ದಾರೆ ಬಿಜೆಪಿ ಚಾಣಾಕ್ಷ್ಯ ಅಮಿತ್ ಶಾ!! ಬಿಜೆಪಿ ನಾಯಕರಲ್ಲಿ ನಡುಕ-ಶಾ ಭೇಟಿಯ ಹಿಂದಿದೆ ಬಲವಾದ ಕಾರಣ

Hindu neighbor gifts plot of land

Hindu neighbour gifts land to Muslim journalist

ಆಗಸ್ಟ್ 04ರಂದು ಬಿಜೆಪಿ ರಾಷ್ಟ್ರಧ್ಯಕ್ಷ ಅಮಿತ್ ಶಾ ರಾಜ್ಯಕ್ಕೆ ಎಂಟ್ರಿ ಕೊಡಲಿದ್ದಾರೆ ಎನ್ನುವ ಮಾಹಿತಿಯೊಂದು ಮೂಲಗಳಿಂದ ತಿಳಿದುಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಹಿಂದೂ ಕಾರ್ಯಕರ್ತನ ಕೊಲೆ ಪ್ರಕರಣದ ಬಳಿಕ ರಾಜ್ಯ ನಾಯಕರ ಮೇಲೆ ಬಿಜೆಪಿ ಕಾರ್ಯಕರ್ತರು ಆಕ್ರೋಶಗೊಂಡ ಬೆನ್ನಲ್ಲೇ ಶಾ ರಾಜ್ಯ ಪ್ರವಾಸ ಕೈಗೊಂಡಿದ್ದಾರೆ ಎಂದು ಹೇಳಲಾಗಿದೆ.

ಬಿಜೆಪಿ ಚಾಣಾಕ್ಷ್ಯ ಅಮಿತ್ ಶಾ ರಾಜ್ಯ ನಾಯಕರ ಗಮನಕ್ಕೆ ತರದೇ ರಾಜ್ಯ ಪ್ರವಾಸ ಕೈಗೊಂಡಿರುವ ವಿಚಾರ ರಾಜ್ಯದ ನಾಯಕರಿಗೆ ಶಾಕ್ ಉಂಟು ಮಾಡಿದ್ದು, ರಾಜ್ಯ ರಾಜಕಾರಣದಲ್ಲಿ ಬದಲಾವಣೆ ಆಗುತ್ತದೆಯೇ ಎನ್ನುವ ಪ್ರಶ್ನೆ ಗಾಢವಾಗಿ ಕಾಡುತ್ತಿದೆ.

ಜಿಲ್ಲೆಯಲ್ಲಿ ನಡೆದ ಸರಣಿ ಕೊಲೆಗಳ ಬಗ್ಗೆ ರಾಜ್ಯ ಸರ್ಕಾರ ಕಠಿಣ ಕ್ರಮದ ಭರವಸೆ ನೀಡಿದ್ದು, ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಮನೆಗೆ ಭೇಟಿ ನೀಡಿದ್ದ ಮುಖ್ಯಮಂತ್ರಿ ಬೊಮ್ಮಾಯಿ ಹತ್ಯೆ ಪ್ರಕರಣವನ್ನು ಎನ್ಐಎ ತನಿಖೆಗೆ ಒಪ್ಪಿಸಿದ್ದು,ಅದಲ್ಲದೇ ದುಷ್ಕರ್ಮಿಗಳಿಂದ ಮೃತಪಟ್ಟ ಮಸೂದ್, ಫಾಯಿಲ್ ಮನೆಗೆ ಭೇಟಿ ಕೊಡುವುದಾಗಿ ಮುಖ್ಯಮಂತ್ರಿ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.

ಸದ್ಯ ಬಿಜೆಪಿ ಕಾರ್ಯಕರ್ತರು ರಾಜ್ಯದ ಕೆಲ ನಾಯಕರ ಬಗೆಗೆ ಮುನಿಸು ವ್ಯಕ್ತಪಡಿಸಿದ್ದು, ರಾಜ್ಯಾದ್ಯಂತ ಬಿಜೆಪಿ ಯುವ ಮೋರ್ಚಾದ ನಾಯಕರುಗಳು ಸ್ಥಾನಕ್ಕೆ ರಾಜೀನಾಮೆ ನೀಡಿ ಆಕ್ರೋಶದ ಜೊತೆಗೆ ಬೇಸರ ವ್ಯಕ್ತಪಡಿಸಿದ್ದಾರೆ. ಅಲ್ಲದೇ ರಾಜ್ಯದ ಹಲವೆಡೆಯಿಂದ ಬಿಜೆಪಿ ಸರ್ಕಾರಕ್ಕೆ ಧಿಕ್ಕಾರ ಕೇಳಿದ್ದು, ಶಾ ಭೇಟಿಯ ಬಳಿಕ ಬಿಜೆಪಿ ಕಾರ್ಯಕರ್ತರ ಕೋಪ ತಣ್ಣಗಾಗಲಿದೆಯೇ ಎನ್ನುವುದನ್ನು ಕಾದುನೋಡಬೇಕಿದೆ.