Home Karnataka State Politics Updates Congress: ಕಾಂಗ್ರೆಸ್ ಗೆ ಮತ್ತೊಂದು ಆಘಾತ- ಮಾಜಿ ಪ್ರಧಾನಿ ಮೊಮ್ಮಗ ಬಿಜೆಪಿ ಸೇರ್ಪಡೆ

Congress: ಕಾಂಗ್ರೆಸ್ ಗೆ ಮತ್ತೊಂದು ಆಘಾತ- ಮಾಜಿ ಪ್ರಧಾನಿ ಮೊಮ್ಮಗ ಬಿಜೆಪಿ ಸೇರ್ಪಡೆ

Hindu neighbor gifts plot of land

Hindu neighbour gifts land to Muslim journalist

Congress : ಲೋಕಸಭಾ ಚುನಾವಣೆ ಹೊತ್ತಲ್ಲಿ ಕಾಂಗ್ರೆಸ್(Congress)ಗೆ ಮತ್ತೊಂದು ಆಘಾತ ಎದುರಾಗಿದ್ದು, ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಮೊಮ್ಮಗ ಪಕ್ಷ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದಾರೆ.

 

ಹೌದು, ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ(Lal bahaddur shastri) ಅವರ ಮೊಮ್ಮಗ ವಿಭಾಕರ್ ಶಾಸ್ತ್ರಿ(Vibhakar shastri) ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆಯನ್ನು ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸಲ್ಲಿಸಿದ್ದಾರೆ. ಬಳಿಕ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಬ್ರಜೇಶ್ ಪಾಠಕ್ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರಿದ್ದಾರೆ.

ಟ್ವೀಟ್ ಮೂಲಕ ರಾಜೀನಾಮೆಯನ್ನು ಖಚಿತಪಡಿಸಿದ ಅವರು ಗೌರವಾನ್ವಿತ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೇ, ನಾನು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇನೆ” ಎಂದು ವಿಭಾಕರ್ ಶಾಸ್ತ್ರಿ ಟ್ವೀಟ್ ಮಾಡಿದ್ದಾರೆ.