Home Interesting Atal Setu Inauguration: ಇಂದು ಪ್ರಧಾನಿ ಮೋದಿಯಿಂದ ಲೋಕಾರ್ಪಣೆಗೊಳ್ಳಲಿದೆ ‘ಅಟಲ್ ಸೇತು’ !!

Atal Setu Inauguration: ಇಂದು ಪ್ರಧಾನಿ ಮೋದಿಯಿಂದ ಲೋಕಾರ್ಪಣೆಗೊಳ್ಳಲಿದೆ ‘ಅಟಲ್ ಸೇತು’ !!

Atal Setu Inauguration

Hindu neighbor gifts plot of land

Hindu neighbour gifts land to Muslim journalist

Atal Setu Inauguration: ಪ್ರಧಾನಿ ನರೇಂದ್ರ ಮೋದಿ(PM Narendra Modi)ಅವರು ಇಂದು ಶುಕ್ರವಾರ ಮಹಾರಾಷ್ಟ್ರದಲ್ಲಿ ಅಟಲ್ ಬಿಹಾರಿ ವಾಜಪೇಯಿ ಸೇವಾರಿ-ನವ ಶೇವಾ ಅಟಲ್ ಸೇತುವನ್ನು(Atal Setu Inauguration) ಉದ್ಘಾಟನೆ ಮಾಡಲಿದ್ದಾರೆ.

ಮುಂಬೈನಲ್ಲಿ ಸುಮಾರು 17,840 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಭಾರತದ ಅತಿ ಉದ್ದದ ಸಮುದ್ರ ಸೇತುವೆಯಾದ `ಅಟಲ್ ಸೇತು`ವನ್ನು ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ. ನಿರ್ಮಿಸಲಾದ ಅಟಲ್ ಸೇತು ದೇಶದ ಅತಿ ಉದ್ದದ ಸೇತುವೆಯಾಗಿದ್ದು, ಸುಮಾರು 18 ಸಾವಿರ ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದೆ.

ಇದನ್ನೂ ಓದಿ: Pratima Muder case:ಗಣಿ ಮತ್ತು ಭೂ ವಿಜ್ಞಾನಿ ಪ್ರತಿಮಾ ಕೊಲೆ ಪ್ರಕರಣದಲ್ಲಿ ಮಹತ್ವದ ಮಾಹಿತಿ!!! ಇಲ್ಲಿದೆ ಸಂಪೂರ್ಣ ವಿವರ

ಅಟಲ್ ಬಿಹಾರಿ ವಾಜಪೇಯಿ ಅವರ ಸ್ಮರಣಾರ್ಥವಾಗಿ ಸಮುದ್ರದ ಸೇತುವೆಗೆ ಅವರ ಹೆಸರನ್ನು ಇಡಲಾಗಿದ್ದು, ನಾಲ್ಕು ಚಕ್ರದ ವಾಹನಗಳ ವೇಗದ ಮಿತಿಯನ್ನು 100 ಕೀ.ಮಿ. ನಿಗದಿ ಮಾಡಲಾಗಿದೆ. ಇದು ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ನವಿ ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವೇಗದ ಸಂಪರ್ಕ ಕಲ್ಪಿಸಲಿದೆ. ಇದು ಮುಂಬೈ ಮತ್ತು ನವಿ ಮುಂಬೈ ನಡುವಿನ ಪ್ರಯಾಣ ಅಂತರವನ್ನು ಕೇವಲ 20 ನಿಮಿಷಗಳಿಗೆ ಕಡಿಮೆ ಮಾಡಲಿದೆ. ಈ ನಡುವೆ, ದೇಶದ ಅತಿ ಉದ್ಧದ ಸೇತುವೆ ಮೇಲೆ ಬೈಕ್‌, ಆಟೋ, ಟ್ರ್ಯಾಕ್ಟ‌ರ್, ಭಾರೀ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಈ ಸೇತುವೆಯ ಏಕಮುಖ ಸಂಚಾರಕ್ಕೆ 250 ರೂಪಾಯಿ, ದ್ವಿಮುಖ ಸಂಚಾರಕ್ಕೆ 375 ರೂಪಾಯಿ ಶುಲ್ಕ ವಿಧಿಸಲಾಗುತ್ತದೆ. ಒಂದು ವರ್ಷದ ನಂತರ ರಾಜ್ಯ ಸರ್ಕಾರ, ಟೋಲ್ ದರವನ್ನು ಮರು ಪರಿಷ್ಕರಣೆ ಮಾಡುವ ಕುರಿತು ಮಾಹಿತಿ ನೀಡಿದೆ.