ಶನಿವಾರ, 24 ಅಕ್ಟೋಬರ್ 2026

By Election : ಬಾಗಲಕೋಟೆ, ದಾವಣಗೆರೆ ಉಪಚುನಾವಣೆ ದಿನಾಂಕ ಘೋಷಣೆ!!

By Election : ಕರ್ನಾಟಕದಲ್ಲಿ ಬಾರಿ ಕುತೂಹಲ ಕೆರಳಿಸಿರುವ ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣದ ಉಪಚುನಾವಣೆ ದಿನಾಂಕ ಕೊನೆಗೂ ಘೋಷಣೆಯಾಗಿದೆ. 

ಎಚ್ ವೈ ಮೇಟಿ ಹಾಗೂ ಶಾಮನೂರು ಶಿವಶಂಕರಪ್ಪ ನಿಧನದ ಹಿನ್ನೆಲೆಯಲ್ಲಿ ಈ ಎರಡು ಕ್ಷೇತ್ರಗಳು ತೆರವಾಗಿವೆ. ಇಂದು ಈ ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆ ಆಗಿದೆ. ಏಪ್ರಿಲ್ 9 ರಂದು ಮತದಾನ ನಡೆಯಲಿದ್ದು ಮೇ 4ಕ್ಕೆ ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ ಎಂದು ಚುನಾವಣಾ ಆಯೋಗ ಘೋಷಿಸಿದೆ.

ಬಾಲಕೋಟೆ ಮತ್ತು ದಾವಣಗೆರೆ ದಕ್ಷಿಣಕ್ಕೆ ಟಿಕೆಟ್ ಫೈಟ್ ಜೋರಾಗಿದೆ. ಟಿಕೆಟ್ ವಿಚಾರವಾಗಿ ಕಾಂಗ್ರೆಸ್ ಮತ್ತು ಬಿಜೆಪಿಯಲ್ಲಿ ಪೈಪೋಟಿ ನಡೆಯುತ್ತಿದೆ. ದಾವಣಗೆರೆ ದಕ್ಷಿಣಕ್ಕೆ ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕು ಎಂಬುವುದು ಕಾಂಗ್ರೆಸ್ ಮುಸ್ಲಿಂ ಮುಖಂಡರ ಬೇಡಿಕೆಯಾಗಿದೆ. ಆದರೆ ಇದಕ್ಕೆ ಸಚಿವ ಎಸ್ ಎಸ್ ಮಲ್ಲಕಾರ್ಜುನ ಅವರ ವಿರೋಧ ಇದೆ. ಬಿಜೆಪಿಯಲ್ಲೂ ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪೈಪೋಟಿ ಇದೆ. ಜಿಎಸ್ ಸಿದ್ದೇಶ್ವರ ಮತ್ತು ಎಂಪಿ ರೇಣುಕಾಚಾರ್ಯ ಬಣಗಳ ನಡುವೆ ಟಿಕೆಟ್ ಗಾಗಿ ಪೈಪೋಟಿ ಇದೆ.