Home Karnataka State Politics Updates Liquor Ban: ಫೆ.14 ರಿಂದ ಮೂರು ದಿನಗಳ ಕಾಲ ಮದ್ಯ ಮಾರಾಟ ಬಂದ್‌!

Liquor Ban: ಫೆ.14 ರಿಂದ ಮೂರು ದಿನಗಳ ಕಾಲ ಮದ್ಯ ಮಾರಾಟ ಬಂದ್‌!

Liquor Ban

Hindu neighbor gifts plot of land

Hindu neighbour gifts land to Muslim journalist

ಬೆಂಗಳೂರಿನಲ್ಲಿ ಫೆ.14ರಿಂದ ಮೂರು ದಿನಗಳ ಕಾಲ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ. ಆದರೆ ನೀವು ಊಹಿಸಿದಂತೆ ಪ್ರೇಮಿಗಳ ದಿನಾಚರಣೆ ಕಾರಣಕ್ಕೆ ಅಲ್ಲ. ವಿಧಾನ ಪರಿಷತ್ತಿನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ ನಿಷೇಧಿಸಲಾಗಿದೆ. ಫೆ.14ರಿಂದ ಮೂರು ದಿನಗಳ ಕಾಲ ಮದ್ಯ ಮಾರಾಟವನ್ನು ನಿಷೇಧಿಸಲಾಗುತ್ತಿದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ.ಎ. ದಯಾನಂದ ಆದೇಶಿಸಿದ್ದಾರೆ.

ಇದನ್ನೂ ಓದಿ: Kadaba: ಮತ್ತೆ ಪ್ರತ್ಯಕ್ಷವಾದ ಕಾಡಾನೆ, ಜನರಲ್ಲಿ ಹೆಚ್ಚಿದ ಆತಂಕ!!

ಫೆ.14ರಿಂದ ಮೂರು ದಿನಗಳ ಕಾಲ ಮದ್ಯ ಮಾರಾಟವನ್ನು ಬೆಂಗಳೂರಿನಲ್ಲಿ ನಿಷೇಧ ಮಾಡಲಾಗಿದೆ. ವಿಧಾನ ಪರಿಷತ್ತಿನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ನಿಷೇಧ ಮಾಡಲಾಗಿದೆ. ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ.ಎ.ದಯಾನಂದ ಅವರು ಆದೇಶ ಮಾಡಿದ್ದಾರೆ. ಫೆ. 14 ಸಂಜೆ 5 ಗಂಟೆಯಿಂದ ಫೆ.17 ಬೆಳಗ್ಗೆ 6 ಗಂಟೆಯವರಗೆ ಬೆಂಗಳೂರು ನಗರ ಜಿಲ್ಲೆಯಾದ್ಯಂತ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ.

ಯಲಹಂಕ, ಬ್ಯಾಟರಾಯನಪುರ, ಯಶವಂತಪುರ, ದಾಸರಹಳ್ಳಿ, ಮಹದೇವಪುರ, ಬೆಂಗಳೂರು ದಕ್ಷಿಣ ಮತ್ತು ಆನೇಕಲ್ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಶಿಕ್ಷಕರು ಮತ ಚಲಾಯಿಸಲಿದ್ದು, ಇಲ್ಲಿ ಜ.16 ರಿಂದ ಫೆ.23ರವರೆಗೆ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದೆ.