Home Karnataka State Politics Updates BJP: ಬಸವನಗೌಡ ಪಾಟೀಲ್ ಯತ್ನಾಳ್ ಗೆ ಬಿಗ್ ಶಾಕ್ ನೀಡಿದ ಬಿಜೆಪಿ ಹೈಕಮಾಂಡ್

BJP: ಬಸವನಗೌಡ ಪಾಟೀಲ್ ಯತ್ನಾಳ್ ಗೆ ಬಿಗ್ ಶಾಕ್ ನೀಡಿದ ಬಿಜೆಪಿ ಹೈಕಮಾಂಡ್

Hindu neighbor gifts plot of land

Hindu neighbour gifts land to Muslim journalist

BJP: ಬಿಜೆಪಿ ನಾಯಕರ ಬಗ್ಗೆ, ಬಿಜೆಪಿ ಪಕ್ಷದ ಬಗ್ಗೆ ಒಂದಿಲ್ಲೊಂದು ವಿವಾದಾತ್ಮಕ ಹೇಳಿಕೆ ನೀಡುತ್ತಾ, ಬಂಡಾಯವೆದ್ದಿರುವಂತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್(Basavanagouda Patil Yatnal)ಅವರಿಗೆ ಬಿಜೆಪಿ ಹೈಕಮಾಂಡ್ ಅವರಿಗೆ ಬಿಗ್ ಶಾಕ್ ನೀಡಲಾಗಿದೆ.

ಬಿಜೆಪಿ ಹೈಕಮಾಂಡ್‌ ಬಿ ವೈ ವಿಜಯೇಂದ್ರ ಅವರನ್ನ ಬಿಜೆಪಿ(BJP) ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದ ದಿನದಿಂದಲೂ ಸಹ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಹಿರಂಗವಾಗಿಯೇ ವಿಜಯೇಂದ್ರ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದರು. ಉಪಚುನಾವಣೆಯಲ್ಲಿ ಬಿಜೆಪಿ ಸೋಲು ಕಂಡ ಬಳಿಕ ಬಣ ಬಡಿದಾಟ ತೀವ್ರ ತಾರಕಕ್ಕೆ ಏರಿತ್ತು. ಹೀಗೆ ಕರ್ನಾಟಕ ಬಿಜೆಪಿ ಬಣ ಜಗಳ ತಾರಕಕ್ಕೇರುತ್ತಿರುವ ಬೆನ್ನಲ್ಲೇ ಬಿಜೆಪಿ ಹೈಕಮಾಂಡ್ ಎಂಟ್ರಿಕೊಟ್ಟಿದೆ. ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಬಿವೈ ವಿಜಯೇಂದ್ರ ದೆಹಲಿಗೆ ತೆರಳಿ ವರಿಷ್ಠರನ್ನು ಭೇಟಿಯಾದ ಬೆನ್ನಲ್ಲೇ ಪಕ್ಷದ ವಿರುದ್ಧ ಸದಾ ಹೇಳಿಕೆಗಳನ್ನು ನೀಡುತ್ತಿರುವ ಬಂಡಾಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​ಗೆ ಬಿಜೆಪಿ ಶಿಸ್ತು ಸಮಿತಿ ಶೋಕಾಸ್ ನೋಟಿಸ್ ನೀಡಿದೆ.

ನೋಟಿಸ್ ನಲ್ಲಿ ಏನಿದೆ?
ರಾಜ್ಯ ಮಟ್ಟದ ಪಕ್ಷದ ನಾಯಕತ್ವದ ವಿರುದ್ಧ ನೀವು (ಬಸನಗೌಡ ಪಾಟೀಲ್ ಯತ್ನಾಳ್) ಮಾಡುತ್ತಿರುವ ನಿರಂತರ ವಾಗ್ದಾಳಿ ಮತ್ತು ಪಕ್ಷದ ನಿರ್ದೇಶನಗಳನ್ನು ಧಿಕ್ಕರಿಸುತ್ತಿರುವ ಬಗ್ಗೆ ಪಕ್ಷದ ವಿವಿಧ ವೇದಿಕೆಗಳಲ್ಲಿ ವರದಿಯಾಗಿದೆ. ರಾಜಕೀಯ ಮತ್ತು ಸಾರ್ವಜನಿಕ ಪ್ರಾಮುಖ್ಯತೆಯ ಎಲ್ಲಾ ವಿಷಯಗಳ ಬಗ್ಗೆ ಪಕ್ಷದ ಅಧಿಕೃತ ನಿಲುವಿಗೆ ವಿರುದ್ಧವಾಗಿ ಸಾರ್ವಜನಿಕವಾಗಿ ನೀವು ಹೇಳಿಕೆಗಳನ್ನು ನೀಡುತ್ತಿರುವುದು ಮತ್ತು ನಿಲುವುಗಳನ್ನು ವ್ಯಕ್ತಪಡಿಸುತ್ತಿರುವುದು ಮಾಧ್ಯಮಗಳಲ್ಲಿ ಮತ್ತು ವಿವಿಧ ಪಕ್ಷದ ವೇದಿಕೆಗಳಲ್ಲಿ ವರದಿಯಾಗಿದೆ.

ಈ ಹಿಂದೆಯೂ ಹಲವು ಬಾರಿ ಶೋಕಾಸ್ ನೋಟಿಸ್ ನೀಡಲಾಗಿತ್ತು. ಆಗ ನೀವು ಸದ್ವರ್ತನೆಯ ಭರವಸೆ ನೀಡಿದ್ದರೂ ಅಶಿಸ್ತಿನ ಕೃತ್ಯಗಳು ನಿಮ್ಮಿಂದ ಅವ್ಯಾಹತವಾಗಿ ನಡೆಯುತ್ತಿರುವುದು ಆತಂಕಕಾರಿ ಸಂಗತಿ. ಇದು ಪಕ್ಷದ ನಿಯಮಗಳ ಗಂಭೀರ ಉಲ್ಲಂಘನೆಯಾಗಿದೆ. ನಿಮ್ಮ ಹಿರಿತನ ಮತ್ತು ಪಕ್ಷದಲ್ಲಿನ ದೀರ್ಘಾವಧಿಯನ್ನು ಗಮನದಲ್ಲಿಟ್ಟುಕೊಂಡು, ಈ ಹಿಂದೆ ನೀವು ಸಲ್ಲಿಸಿದ ವಿವರಣೆಗಳ ಬಗ್ಗೆ ಕೇಂದ್ರ ಶಿಸ್ತು ಸಮಿತಿಯು ಮೃದುವಾದ ದೃಷ್ಟಿಕೋನವನ್ನು ತೆಗೆದುಕೊಂಡಿತ್ತು ಎಂದು ಶೋಕಾಸ್ ನೋಟಿಸ್​ನಲ್ಲಿ ಉಲ್ಲೇಖಿಸಲಾಗಿದೆ.

ಅಲ್ಲದೆ ಮುಂದುವರಿದು, ನಿಮ್ಮ ವಿರುದ್ಧ ಶಿಸ್ತು ಕ್ರಮ ಯಾಕೆ ಕೈಗೊಳ್ಳಬಾರದು ಎಂಬುದನ್ನು ತಿಳಿಸಿ. ಹತ್ತು ದಿನಗಳ ಒಳಗೆ ಪ್ರತಿಕ್ರಿಯೆ ನೀಡಬೇಕು. ಈ ಸಮಯದೊಳಗೆ ನಿಮ್ಮ ವಿವರಣೆಯನ್ನು ಸಲ್ಲಿಸದಿದ್ದಲ್ಲಿ, ಕೇಂದ್ರ ಶಿಸ್ತು ಸಮಿತಿಯು ನಿಮಗೆ ಹೇಳಲು ಏನೂ ಇರುವುದಿಲ್ಲ. ಈ ವಿಷಯದಲ್ಲಿ ಅಂತಿಮ ತೀರ್ಮಾನ ತೆಗೆದುಕೊಳ್ಳಲು ಮುಂದುವರಿಯುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ ಎಂದು ಶೋಕಾಸ್ ನೋಟೀಸ್​ನಲ್ಲಿ ಉಲ್ಲೇಖಿಸಲಾಗಿದೆ.