

BJP protest: ಬೆಂಗಳೂರು : ವಿದ್ಯುತ್ ಬೆಲೆ ಏರಿಕೆ, ಗೋಹತ್ಯೆ ನಿಷೇಧ ಕಾಯ್ದೆ ರದ್ದತಿ, ಹಾಲಿಗೆ ಪ್ರೋತ್ಸಾಹ ಧನ ಕಡಿತ ವಿರೋಧಿಸಿ ಇಂದು ಮತ್ತು ನಾಳೆ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ (BJP protest) ನಡೆಸಲಾಗಿದೆ.
ಕಾಂಗ್ರೆಸ್ ಸರ್ಕಾರದ ವಿರುದ್ಧಇಂದು ಎಲ್ಲಾ ಜಿಲ್ಲಾ ಕೇಂದ್ರಗಳು, ನಾಳೆ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಯಲಿದೆ. ಶಾಸಕರು, ಮಾಜಿ ಸಚಿವರು, ಮಾಜಿ ಶಾಸಕರು ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ.
ಕಾಂಗ್ರೆಸ್ ಐದು ಗ್ಯಾರಂಟಿ ಯೋಜನೆ ಜಾರಿಯ ಭರವಸೆಯೊಂದಿಗೆ ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಭಾರೀ ಬಹುಮತದೊಂದಿಗೆ ಅಧಿಕಾರದ ಪಟ್ಟವೇರಿದೆ. ಈ ಬಾರಿ ಕಾಂಗ್ರೆಸ್ ನಿರೀಕ್ಷೆಗೂ ಮೀರಿದ ಗೆಲುವು ಸಾಧಿಸಿದ್ದು ಬಿಜೆಪಿಗೆ ಭಾರೀ ಮುಖಭಂಗವಾಗಿದೆ. ಈ ಬೆನ್ನಲ್ಲೆ ಹಲವು ವಿಚಾರವಾಗಿ ಇಂದು ಮತ್ತು ನಾಳೆ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ಮುಂದಾಗಿದ್ದು, ವಿದ್ಯುತ್ ಬೆಲೆ ಏರಿಕೆ, ಗೋಹತ್ಯೆ ನಿಷೇಧ ಕಾಯ್ದೆ ರದ್ದತಿ, ಹಾಲಿಗೆ ಪ್ರೋತ್ಸಾಹ ಧನ ಕಡಿತ ವಿರೋಧ ವ್ಯಕ್ತಪಡಿಸಲಾಗುತ್ತಿದೆ.
ಇದನ್ನೂ ಓದಿ:ಇಂದು ಸಿಎಂ ಸಿದ್ದರಾಮಯ್ಯ ದಾವಣಗೆರೆ ಜಿಲ್ಲಾ ಪ್ರವಾಸ : ಇಲ್ಲಿದೆ ಹೈಲೈಟ್ಸ್













