Home Karnataka State Politics Updates CAA Enforcement: ಸಿಎಎ ಜಾರಿ ಹಿನ್ನಲೆ : ರಾಷ್ಟ್ರ ರಾಜಧಾನಿಯ ಹಲವಾರು ಭಾಗಗಳಲ್ಲಿ ಭದ್ರತೆ ಹೆಚ್ಚಳ

CAA Enforcement: ಸಿಎಎ ಜಾರಿ ಹಿನ್ನಲೆ : ರಾಷ್ಟ್ರ ರಾಜಧಾನಿಯ ಹಲವಾರು ಭಾಗಗಳಲ್ಲಿ ಭದ್ರತೆ ಹೆಚ್ಚಳ

CAA Enforcement

Hindu neighbor gifts plot of land

Hindu neighbour gifts land to Muslim journalist

ದೇಶದಾದ್ಯಂತ ಪೌರತ್ವ ತಿದ್ದುಪಡಿ ಕಾಯ್ದೆ ಅಧಿಕೃತವಾಗಿ ಜಾರಿಗೆ ಬಂದಿದ್ದು ದೆಹಲಿಯಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ.

ಇದನ್ನೂ ಓದಿ: Dakshina Kannada (Bantwala): ರಾತ್ರಿಪಾಳಿನ ಕೆಲಸ ಮುಗಿಸಿ ಬೈಕಿನಲ್ಲಿ ಬರುತ್ತಿದ್ದ ಯುವಕ ಮರಕ್ಕೆ ಡಿಕ್ಕಿ ಹೊಡೆದು ಸಾವು

ಕೇಂದ್ರ ಗೃಹ ಸಚಿವಾಲಯವು ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ), 2019ರ ಅನುಷ್ಠಾನದ ನಿಯಮಗಳನ್ನು ಜಾರಿಗೆ ತರುವುದರೊಂದಿಗೆ, ದೆಹಲಿಯ ಹಲವಾರು ಭಾಗಗಳಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ.

ಈಶಾನ್ಯ ದೆಹಲಿ, ಶಾಹೀನ್ ಬಾಗ್, ಜಾಮಿಯಾ ನಗರ ಮತ್ತು ಇತರ ಸೂಕ್ಷ್ಮ ಪ್ರದೇಶಗಳಲ್ಲಿ ಅರೆಸೈನಿಕ ಸಿಬ್ಬಂದಿಯ ತೀವ್ರ ಗಸ್ತು ವ್ಯವಸ್ಥೆ ಮಾಡಲಾಗಿದೆ.

ಈ ಹಿಂದೆ 2020ರಲ್ಲಿ, ಸಿಎಎ ಮತ್ತು ಎನ್ಆರ್ಸಿ (ರಾಷ್ಟ್ರೀಯ ನಾಗರಿಕರ ನೋಂದಣಿ) ಘೋಷಣೆಯ ವಿರುದ್ಧ ರಾಜಧಾನಿಯಲ್ಲಿ ಗಲಭೆಗಳು ನಡೆದಿದ್ದವು, ಈ ಗಲಭೆಯು 53 ಜನರ ಸಾವಿಗೆ ಕಾರಣವಾಗಿತ್ತು ಮತ್ತು 500ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.

ಈ ರೀತಿಯ ದುರ್ಘಟನೆ ಮತ್ತೆ ಮರುಕಳಿಸಬಾರದು ಎಂಬ ಕಾರಣಕ್ಕೆ ರಾಷ್ಟ್ರ ರಾಜಧಾನಿಯಲ್ಲಿ ಹೆಚ್ಚಿನ ಸಶಸ್ತ್ರ ತುಕಡಿಗಳನ್ನು ಕೇಂದ್ರ ಸರ್ಕಾರ ನಿಯೋಜನೆ ಮಾಡಿದೆ.