Home Karnataka State Politics Updates ಉಪಚುನಾವಣೆ ಬಳಿಕ ಕಾಂಗ್ರೆಸ್ ಅಸ್ತಿತ್ವ ಶೂನ್ಯ -ಬಿ.ವೈ.ವಿಜಯೇಂದ್ರ

ಉಪಚುನಾವಣೆ ಬಳಿಕ ಕಾಂಗ್ರೆಸ್ ಅಸ್ತಿತ್ವ ಶೂನ್ಯ -ಬಿ.ವೈ.ವಿಜಯೇಂದ್ರ

Hindu neighbor gifts plot of land

Hindu neighbour gifts land to Muslim journalist

ಹಾನಗಲ್, ಸಿಂದಗಿ ಎರಡೂ ಕ್ಷೇತ್ರಗಳಲ್ಲಿ ದಿನೇ ದಿನೇ ಬಿಜೆಪಿ ಗೆಲುವು ನಿಶ್ಚಿತ ಎಂಬ ಸ್ಥಿತಿ ನಿರ್ಮಾಣವಾಗಿದೆ. ಉಪಚುನಾವಣೆ ಬಳಿಕ ರಾಜ್ಯದಲ್ಲಿ ಕಾಂಗ್ರೆಸ್ ಅಸ್ತಿತ್ವ ಶೂನ್ಯವಾಗಲಿದೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಅವರು ಶನಿವಾರ ವಿಜಯನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ, ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತವಾಗಿದ್ದು, ಆತಂಕದಲ್ಲಿರುವ ಕಾಂಗ್ರೆಸ್, ಜೆಡಿಎಸ್ ಮೇಲ್ನೋಟದ ಹೋರಾಟ ನಡೆಸಿದ್ದಾರೆ ಅಷ್ಟೇ ಎಂದರು.

ಜನರ ಮುಂದೆ ಮಂಡಿಸಲು ವಿಷಯಗಳೇ ಇಲ್ಲದ ವಿಪಕ್ಷಗಳು ವ್ಯಕ್ತಿಗತ ಟೀಕೆಯಲ್ಲಿ ತೊಡಗಿವೆ. ಬರುವ ದಿನಗಳಲ್ಲಿ ಕಾಂಗ್ರೆಸ್ ವಿಳಾಸ ಕಳೆದುಕೊಳ್ಳಲಿದೆ. ರಾಜ್ಯದಲ್ಲಿ ಕಾಂಗ್ರೆಸ್ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ಮಧ್ಯೆ ಬಹಿರಂಗ ಸಮರವೇ ನಡೆದಿದೆ ಎಂದರು.