Home Karnataka State Politics Updates Congress: ಆಸ್ಪತ್ರೆಗಳು ಶವಾಗಾರವಾಗಲು ಕಾಂಗ್ರೆಸ್ ಸರ್ಕಾರವೇ ಕಾರಣ: ಛಲವಾದಿ ನಾರಾಯಣಸ್ವಾಮಿ

Congress: ಆಸ್ಪತ್ರೆಗಳು ಶವಾಗಾರವಾಗಲು ಕಾಂಗ್ರೆಸ್ ಸರ್ಕಾರವೇ ಕಾರಣ: ಛಲವಾದಿ ನಾರಾಯಣಸ್ವಾಮಿ

Hindu neighbor gifts plot of land

Hindu neighbour gifts land to Muslim journalist

Congress: ಬಾಣಂತಿಯರು, ಹಸುಗೂಸುಗಳ ಸಾವಿನಿಂದಾಗಿ ಆಸ್ಪತ್ರೆಗಳು ಶವಾಗಾರವಾಗುವ ಪರಿಸ್ಥಿತಿ ಉಂಟಾಗಿದೆ. ಇದಕ್ಕೆ ಕಾಂಗ್ರೆಸ್ ಸರ್ಕಾರವೇ ಕಾರಣ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ (Chalavadi Narayanaswamy) ಹೇಳಿದರು.

ಹೌದು, ಬೆಳಗಾವಿಯಲ್ಲಿ (Belagavi) ಮಾತನಾಡಿದ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು, ಬಾಣಂತಿಯರು, ನವಜಾತ ಶಿಶುಗಳ ಸಾವಿನ ವಿಷಯದಲ್ಲಿ ರಾಜ್ಯಾದ್ಯಂತ ಗೊಂದಲದ ವಾತಾವರಣ ಇದೆ. ಆಸ್ಪತ್ರೆಗಳು ಶವಾಗಾರವಾಗುವ ಪರಿಸ್ಥಿತಿಯನ್ನು ನಾವು ನೋಡುತ್ತಿದ್ದೇವೆ. ಈ ಸ್ಥಿತಿಗೆ ಕಾಂಗ್ರೆಸ್ ಸರ್ಕಾರವೇ ಕಾರಣ ಎಂದು ಟೀಕಿಸಿದ್ದಾರೆ.

ಕಾಂಗ್ರೆಸ್ಸಿಗರು (C0ngress) ಭ್ರಷ್ಟಾಚಾರ ಮಾಡುವ ಕಡೆ ಗಮನ ಕೊಡುತ್ತಿದ್ದು, ಆಸ್ಪತ್ರೆಗಳ ಮೇಲೆ ನಿಯಂತ್ರಣ ಇಲ್ಲವಾಗಿದೆ. ಔಷಧಿ ಕೊಂಡುಕೊಳ್ಳುವಾಗ ಕಳಪೆ ಔಷಧಿಗಳನ್ನು ಖರೀದಿಸಿದ್ದಾರೆ. ಅವುಗಳನ್ನು ಬಳಸಿದ್ದರಿಂದ ಅನೇಕ ಕಡೆ ಈ ರೀತಿಯ ದಾರುಣ ಘಟನೆಗಳು ನಡೆದಿವೆ. ಇದೇ ಕಾರಣಕ್ಕೆ ರಾಜ್ಯಾಧ್ಯಕ್ಷ ವಿಜಯೇಂದ್ರ, ಡಾ.ಅಶ್ವತ್ಥನಾರಾಯಣ್, ಶಶಿಕಲಾ ಜೊಲ್ಲೆ, ಹೇಮಲತಾ ನಾಯಕ್ ಸೇರಿ ನಾವೆಲ್ಲ ಇಲ್ಲಿಗೆ ಭೇಟಿ ಕೊಟ್ಟಿದ್ದೇವೆ ಎಂದರು.