Home Karnataka State Politics Updates JDS ಪಕ್ಷ ವಿಸರ್ಜನೆ ಯಾವಾಗ ಎಂದು ಕಾಂಗ್ರೆಸ್ ಕೀಟ್ಲೆ: 123 ಸ್ಥಾನ ಬಾರದಿದ್ದರೆ ಪಕ್ಷ ವಿಸರ್ಜನೆ...

JDS ಪಕ್ಷ ವಿಸರ್ಜನೆ ಯಾವಾಗ ಎಂದು ಕಾಂಗ್ರೆಸ್ ಕೀಟ್ಲೆ: 123 ಸ್ಥಾನ ಬಾರದಿದ್ದರೆ ಪಕ್ಷ ವಿಸರ್ಜನೆ ಎಂಬ HDK ಹೇಳಿಕೆ ಹಿನ್ನೆಲೆ

Hindu neighbor gifts plot of land

Hindu neighbour gifts land to Muslim journalist

HD KUMARASWAMY : ಜೆಡಿಎಸ್‌ ಪಕ್ಷವನ್ನು ವಿಸರ್ಜನೆ ಮಾಡುವುದೂ ಇಲ್ಲ ಎಂದು ಕಾಂಗ್ರೆಸ್‌ ವಿರುದ್ಧ ಜೆಡಿಎಸ್‌ ನಾಯಕ ಹೆಚ್‌.ಡಿ.ಕುಮಾರಸ್ವಾಮಿ (HD KUMARASWAMY) ಪ್ರತಿಕ್ರಿಯೆ ನೀಡುವ ಮೂಲಕ ತಿರುಗೇಟು ನೀಡಿದ್ದಾರೆ.

ಕರ್ನಾಟಕ ವಿಧಾನ ಸಭೆ ಚುನಾವಣೆಯಲ್ಲಿ ಭಾರೀ ಬಹುಮತದೊಂದಿಗೆ ಕಾಂಗ್ರೆಸ್‌ ಅಧಿಕಾರದ ಪಟ್ಟವೇರಿದೆ. ಈ ಬೆನ್ನಲ್ಲೆ ಜೆಡಿಎಸ್​ಗೆ ಬಹುಮತ ಸಿಗದಿದ್ದರೆ ಪಕ್ಷ ವಿಸರ್ಜನೆ ಮಾಡುವುದಾಗಿ ಹೆಚ್​ಡಿ ಕುಮಾರಸ್ವಾಮಿ ಹೇಳಿಕೆ ನೆಟ್ಟಿಗರು ಫುಲ್‌ ಟೀಕೆ ಮಾಡಿದಲ್ಲದೇ, ಪಕ್ಷ ವಿಸರ್ಜನೆ ಯಾವಾಗ? ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನೆ ಕೇಳುವ ಮೂಲಕ ಹೆಚ್‌ಡಿಕೆ ಅವರ ಕಾಲೆಳೆದಿದ್ದಾರೆ.

ಇದಕ್ಕೆ ಜೆಡಿಎಸ್‌ ನಾಯಕ ಹೆಚ್‌ಡಿ ಕುಮಾರ ಸ್ವಾಮಿ ತಮ್ಮ ಅಧಿಕೃತ ಟ್ಟಿಟ್ಟರ್‌ ಖಾತೆಯಲ್ಲಿ ಬರೆಯುವ ಮೂಲಕ ಖಡಕ್‌ ಟಾಂಗ್‌ ಕೊಟ್ಟಿದ್ದಾರೆ.” ಪಕ್ಷ ವಿಸರ್ಜನೆ, ಅಂತಿಮ ಸಂಸ್ಕಾರದ ಹೇಳಿಕೆ ಕೊಟ್ಟ ಸಂಸ್ಕಾರಹೀನರಿಗೆ ಹೇಳುವುದು ಇಷ್ಟೇ. ನನಗೆ 123 ಸೀಟು ಬಂದಿಲ್ಲ, ಪಂಚರತ್ನ ಜಾರಿಗೆ ಜನರು ಅವಕಾಶವನ್ನೂ ಕೊಟ್ಟಿಲ್ಲ, ಹಾಗಾಗಿ ಪಕ್ಷವನ್ನು ವಿಸರ್ಜನೆ ಮಾಡುವುದೂ ಇಲ್ಲ. ಇನ್ನೇನಾದರೂ ಅನುಮಾನ ಇದ್ದವರು ಬರಲಿ, ಅಂಥವರ ಅಜ್ಞಾನ ಹೋಗಲಾಡಿಸುತ್ತೇನೆ ” ಎಂದಿದ್ದಾರೆ.
https://twitter.com/hd_kumaraswamy/status/1663735266241298432?s=20

ಕೆಲವರ ವಿವೇಕರಹಿತ ಹೇಳಿಕೆಗಳಿಗೆ ಉತ್ತರಿಸುವುದು ಬೇಡ ಭಾವಿಸಿದ್ದೆ. ನಾನು ಸೋತ ನೋವಿನಲ್ಲಿದ್ದೇನೆ. ಕಾಂಗ್ರೆಸ್ ನವರು ಗೆದ್ದ ಅಹಂನಲ್ಲಿ ಇದ್ದಾರೆ. ಅಹಂ ಅಳಿಯುತ್ತದೆ ಅನ್ನುವ ಕನಿಷ್ಠ ಅರಿವು ಅವರಿಗೆ ಇದ್ದಂತೆ ಇಲ್ಲ. ಆ ಅರಿವು ಬರುವ ಕಾಲವೂ ದೂರವಿಲ್ಲ. ಕಾಯುವ ತಾಳ್ಮೆ ನನಗಿದೆ ಎಂದಿದ್ದಾರೆ.

ಇದನ್ನೂ ಓದಿ: The Kerala Story: ಕೇರಳ ಸ್ಟೋರಿ ಪ್ರದರ್ಶಿಸಿದರೆ ಥಿಯೇಟರ್ ಸ್ಫೋಟ – ISIS ಬೆದರಿಕೆ