Davangere : ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಶಾಮನೂರು ಮೊಮ್ಮಗನಿಗೆ ಕಾಂಗ್ರೆಸ್ ಟಿಕೆಟ್ ನೀಡಿದ ಹಿನ್ನೆಲೆಯಲ್ಲಿ, ಅಲ್ಪಸಂಖ್ಯಾತರಿಗೆ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಸಿಗದ ಕಾರಣ 20 ಕ್ಕೂ ಹೆಚ್ಚು ಅಲ್ಪಸಂಖ್ಯಾತ ಮುಖಂಡರು (Muslim Leaders), ಯುವನಾಯಕರು ಬಿಜೆಪಿ ಸೇರ್ಪಡೆಯಾಗಿದ್ದಾರೆ.
Sponsoredಅಲ್ಪಸಂಖ್ಯಾತ ಸಮುದಾಯಕ್ಕೆ ಟಿಕೆಟ್ ನೀಡಬೇಕೆಂಬ ಬೇಡಿಕೆ ಕಡೆಗಣಿಸಿದ್ದಕ್ಕೆ ಮುಸ್ಲಿಂ ಮುಖಂಡರು ಕೆಂಡಾಮಂಡಲವಾಗಿದ್ದಾರೆ. ಈ ಬಾರಿ ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸ್ತೀವಿ ಎಂದು ಎಚ್ಚರಿಕೆ ನೀಡಿ, ದಾವಣಗೆರೆ (Davanagere) ದಕ್ಷಿಣ ಕ್ಷೇತ್ರದ ಅಭ್ಯರ್ಥಿ ಶ್ರೀನಿವಾಸ್ ದಾಸ ಕರಿಯಪ್ಪನ ನೇತೃತ್ವದಲ್ಲಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
Marriage AdSponsoredಇದೇ ವೇಳೆ ಮುಖಂಡರು ಮುಂದಿನ ದಿನಗಳಲ್ಲಿ ಇನ್ನಷ್ಟು ಅಲ್ಪಸಂಖ್ಯಾತರನ್ನ ಬಿಜೆಪಿಗೆ ಸೇರಿಸುವುದಾಗಿ ವಾಗ್ದಾನ ಮಾಡಿದ್ದಾರೆ. ಜೊತೆಗೆ ಒಟ್ಟಾಗಿ ಕೆಲಸ ಮಾಡಿ ಕಾಂಗ್ರೆಸ್ ಅಭ್ಯರ್ಥಿಯನ್ನ (Congress Candidate) ಸೋಲಿಸುವುದಾಗಿ ಪಣ ತೊಟ್ಟಿದ್ದಾರೆ. ನಮ್ಮನ್ನ ಕೇವಲ ವೋಟ್ ಬ್ಯಾಂಕ್ ಆಗಿ ಬಳಸಿಕೊಳ್ತೀರಿ, ಅಧಿಕಾರ ಕೊಡಲ್ಲ ಎಂದು ಮುಖಂಡರು ಬಹಿರಂಗವಾಗಿಯೇ ಆಕ್ರೋಶ ಹೊರಹಾಕುತ್ತಿದ್ದಾರೆ.
ಇನ್ನು ಈ ಅಸಮಾಧಾನ ಕೇವಲ ಮಾತಿಗೆ ಸೀಮಿತವಾಗಿಲ್ಲ. ಇಂದು ಹತ್ತಾರು ಸಂಖ್ಯೆಯಲ್ಲಿ ಮುಸ್ಲಿಂ ಮುಖಂಡರು ಪಕ್ಷೇತರರಾಗಿ ನಾಮಪತ್ರ ಸಲ್ಲಿಸಲು ಸಜ್ಜಾಗಿದ್ದಾರೆ. ಸಚಿವ ಜಮೀರ್ ಅಹಮ್ಮದ್ ಬೆಂಬಲಿತ ಪಡೆಯೂ ಈ ಬಂಡಾಯದಲ್ಲಿ ಒಳಗೊಳಗೇ ಕೈಜೋಡಿಸಿದೆಯಾ ಎಂಬ ಅನುಮಾನ ದಟ್ಟವಾಗಿದೆ.




