Home Karnataka State Politics Updates D K Shivkumar: ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ಕೊಟ್ಟ ಡಿ ಕೆ ಶಿವಕುಮಾರ್ !!

D K Shivkumar: ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ಕೊಟ್ಟ ಡಿ ಕೆ ಶಿವಕುಮಾರ್ !!

Hindu neighbor gifts plot of land

Hindu neighbour gifts land to Muslim journalist

D K Shivkumar : ಇತ್ತೀಚೆಗೆ ಸಿಎಂ(CM) ನೇತೃತ್ವದ ಸಂಪುಟ ಸಭೆಯಲ್ಲಿ ಏಳನೇ ವೇತನ ಆಯೋಗದ (7th Pay Commission) ಶಿಫಾರಸುಗಳ ಜಾರಿ ವಿಚಾರವಾಗಿ ಚರ್ಚೆ ನಡೆದರೂ ಯಾವುದೇ ನಿರ್ಣಯ ಹೊರಬೀಳದಿದ್ದದ್ದು ಸರ್ಕಾರಿ ನೌಕರರಿಗೆ ಭಾರೀ ನಿರಾಶೆ ಮೂಡಿಸಿತ್ತು. ಆದರೀಗ ಈ ಬೆನ್ನಲ್ಲೇ ಡಿಕೆ ಶಿವಕುಮಾರ್(D K Shivkumar) ಅವರು ಸರ್ಕಾರಿ ನೌಕರರಿಗೆ(Government Employees) ಹೊಸ ಗುಡ್ ನ್ಯೂಸ್ ಕೊಟ್ಟಿದ್ದಾರೆ.

ಜೂನ್ 15ರಂದು ಅವರು ಬೆಂಗಳೂರಿನ(Bengaluru) ಟೌನ್‌ಹಾಲ್‌ನಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಆಯೋಜಿಸಿದ್ದ ಬೆಂಗಳೂರು ನಗರ, ರಾಮನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಉಪಮುಖ್ಯಮಂತ್ರಿ ಡಿಕೆಶಿ ಅವರು ಸರ್ಕಾರಿ ನೌಕರರಿಗೆ ಹೊಸ ಭರವಸೆ ನೀಡಿದ್ದಾರೆ.

ಡಿ. ಕೆ. ಶಿವಕುಮಾರ್ ಭರವಸೆ ಏನು?
ಡಿ. ಕೆ. ಶಿವಕುಮಾರ್ ಅವುರ’ ಸರ್ಕಾರಿ ನೌಕರರ ಸಮಸ್ಯೆಗಳ ಅರಿವು ಇದೆ. ಮಂತ್ರಿಗಳು ಸರ್ಕಾರದ ಸೇವಕರೇ. ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಎಲ್ಲರೂ ಪ್ರಾಮಾಣಿಕವಾಗಿ ಪ್ರಯತ್ನಿಸೋಣ. 7ನೇ ವೇತನ ಆಯೋಗದ ಶಿಫಾರಸುಗಳ ಜಾರಿಗೆ ಸರ್ಕಾರ ಬದ್ಧವಾಗಿದೆ. ನೌಕರರ ಎಲ್ಲಾ ಬೇಡಿಕೆಗಳನ್ನು ಹಂತ-ಹಂತವಾಗಿ ಈಡೇರಿಸಲಾಗುತ್ತದೆ. ಲೋಕಸಭೆ ಚುನಾವಣೆ ಸರ್ಕಾರಿ ನೌಕರರು ಸರ್ಕಾರದ ವಿರುದ್ಧ ಅಸಮಾಧಾನಗೊಂಡಿರುವುದಕ್ಕೆ ಸಾಕ್ಷಿಯಾಗಿದೆ” ಎಂದರು.