Home Karnataka State Politics Updates ಇಂದು ರಾಜ್ಯಕ್ಕೆ ಆಗಮಿಸಲಿರುವ ಎನ್ ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು

ಇಂದು ರಾಜ್ಯಕ್ಕೆ ಆಗಮಿಸಲಿರುವ ಎನ್ ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು

Hindu neighbor gifts plot of land

Hindu neighbour gifts land to Muslim journalist

ಬೆಂಗಳೂರು : ಎನ್ ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಇಂದು ರಾಜ್ಯಕ್ಕೆ ಭೇಟಿ ನೀಡಲಿದ್ದು, ಬಿಜೆಪಿ ಶಾಸಕರು ಮತ್ತು ಸಂಸದರ ಸಭೆಯಲ್ಲಿ ಪಾಲ್ಗೊಳ್ಳಳಿದ್ದಾರೆ.

ಖಾಸಗಿ ಹೋಟೆಲ್ ನಲ್ಲಿ ನಡೆಯುತ್ತಿರುವ ಬಿಜೆಪಿ ಶಾಸಕರು ಮತ್ತು ಸಂಸದರ ಸಭೆಯಲ್ಲಿ ದ್ರೌಪದಿ ಮುರ್ಮು ಭಾಗವಹಿಸಲಿದ್ದಾರೆ. ದ್ರೌಪದಿ ಮುರ್ಮು ಅವರನ್ನು ಸ್ವಾಗತಿಸಲು ಬಿಜೆಪಿ ರಾಜ್ಯ ಘಟಕ ಸಿದ್ಧತೆ ನಡೆಸಿವೆ.

ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಅರುಣ್‌ ಕುಮಾರ್‌ ಮಾರ್ಗದರ್ಶನದಲ್ಲಿ ಮುರ್ಮು ಸ್ವಾಗತಕ್ಕೆ ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ದ್ರೌಪದಿ ಮುರ್ಮು ಅವರು ಆದಿವಾಸಿ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ಕೋಲಾಟ ಸೇರಿದಂತೆ 20 ಆದಿವಾಸಿ ಕಲಾತಂಡಗಳಿಂದ ಅವರನ್ನು ಆತ್ಮೀಯವಾಗಿ ಸ್ವಾಗತಿಸಲು ನಿರ್ಧರಿಸಲಾಗಿದೆ. ಮಹಿಳಾ ಮೋರ್ಚಾ ವತಿಯಿಂದ 2,500 ಮಹಿಳೆಯರು ಶಾಂಗ್ರಿ ಲಾ ಹೋಟೆಲ್‌ ಬಳಿ ಸೇರಿ ಅವರನ್ನು ಸ್ವಾಗತಿಸಲು ತೀರ್ಮಾನಿಸಲಾಗಿದೆ.

ಜುಲೈ 18 ರಂದು ರಾಷ್ಟ್ರಪತಿ ಆಯ್ಕೆಗೆ ಮತದಾನ ನಡೆಯಲಿದ್ದು, ದ್ರೌಪದಿ ಮುರ್ಮುರವರು ರಾಷ್ಟ್ರಪತಿಯಾಗಿ ಆಯ್ಕೆಯಾಗುವುದು ಬಹುತೇಕವಾಗಿ ಖಚಿತವಾಗಿದೆ ಎಂದಿದ್ದಾರೆ.